ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ 
ರಾಜ್ಯ

ಉತ್ತರ ಕರ್ನಾಟಕಕ್ಕೆ ನೀರು ಬಿಡಲು ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

Srinivas Rao BV

ಬೆಂಗಳೂರು: ಉತ್ತರ ಕರ್ನಾಟಕದ ಭಾಗದಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ರಾಜ್ಯದ ಕೃಷ್ಣ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವುದಕ್ಕೆ ಸಿಎಂ ಏಕನಾಥ್ ಶಿಂಧೆಗೆ ಮನವಿ ಮಾಡಿದ್ದಾರೆ.

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಭೀಕರ ಬಿಸಿಲಿನ ಪರಿಣಾಮ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಮಾರ್ಚ್ ನಲ್ಲಿಯೇ ಈ ಸಮಸ್ಯೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

`ಹಿಂದಿನ ಸಂದರ್ಭಗಳಲ್ಲಿ, ಬೇಸಿಗೆ ಕಾಲದಲ್ಲಿ, ಮಹಾರಾಷ್ಟ್ರ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿತ್ತು. ಕರ್ನಾಟಕದ ಜನ ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಕೃಷ್ಣಾ ನದಿಗೆ ನೀರನ್ನು ಬಿಡುಗಡೆ ಮಾಡಿತು. ಮಹಾರಾಷ್ಟ್ರ ರಾಜ್ಯಕ್ಕೆ ರಾಜ್ಯ ಸರ್ಕಾರ ಪ್ರಾಮಾಣಿಕ ಧನ್ಯವಾದಗಳನ್ನು ತಿಳಿಸುತ್ತದೆ,'' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಸ್ತುತ ಉತ್ತರ ಕರ್ನಾಟಕದ ಜಿಲ್ಲೆಗಳು ಮುಂಗಾರು ವೈಫಲ್ಯದಿಂದ ಭೀಕರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಜಲಾಶಯಗಳ ಸಂಗ್ರಹವು ಗಣನೀಯವಾಗಿ ಖಾಲಿಯಾಗಿದೆ ಮತ್ತು ಲಭ್ಯವಿರುವ ನೀರು ಮಾನವ ಮತ್ತು ಜಾನುವಾರುಗಳ ಮನೆಯ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ ಎಂದು ಸಿಎಂ ಹೇಳಿದರು. ಮುಂಗಾರು ಹಂಗಾಮು ಇನ್ನೂ ಮುಂದಿದ್ದು, ಮುಂಗಾರು ಪ್ರಾರಂಭವಾಗುವವರೆಗೆ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಅವರು ಹೇಳಿದರು.

ಉತ್ತರ ಭಾಗದ ಜನ-ಜಾನುವಾರುಗಳಿಗೆ ತಕ್ಷಣದ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ಕರ್ನಾಟಕಕ್ಕೆ ನೆರವಾಗಲು ವಾರ್ನಾ ಅಥವಾ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಮತ್ತು ಉಜ್ಜಿನಿ ಜಲಾಶಯದಿಂದ ಭೀಮಾ ನದಿಗೆ ಇನ್ನೂ 1 ಟಿಎಂಸಿ ನೀರು ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಿದ್ದರಾಮಯ್ಯ ಶಿಂಧೆ ಮನವಿ ಮಾಡಿದರು.

SCROLL FOR NEXT