ಮೆಟ್ರೋ ಹಳಿ 
ರಾಜ್ಯ

ಬೆಂಗಳೂರು: ಮೆಟ್ರೋ ಹಳಿಗೆ ಹಾರುವ ಮುನ್ನ ಪೋಷಕರಿಗೆ ಫೋನ್ ಮಾಡಿದ್ದ ವಿದ್ಯಾರ್ಥಿ!

ಮೆಟ್ರೋ ಹಳಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ ಧ್ರುವ್ ಠಕ್ಕರ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಹಾಗೂ ತನ್ನ ಜೀವನ ಅರ್ಥಹೀನ ಎಂದು ಆಗಾಗ್ಗೆ ಭಾವಿಸುತ್ತಿದ್ದ ಎಂಬ ಮಾಹಿತಿ ಇದೀಗ ತಿಳಿದುಬಂದಿದೆ.

ಬೆಂಗಳೂರು: ಮೆಟ್ರೋ ಹಳಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ ಧ್ರುವ್ ಠಕ್ಕರ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಹಾಗೂ ತನ್ನ ಜೀವನ ಅರ್ಥಹೀನ ಎಂದು ಆಗಾಗ್ಗೆ ಭಾವಿಸುತ್ತಿದ್ದ ಎಂಬ ಮಾಹಿತಿ ಇದೀಗ ತಿಳಿದುಬಂದಿದೆ.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಮೊದಲ ವರ್ಷದ ಬಿಎ ಎಲ್ಎಲ್ಬಿ ವಿದ್ಯಾರ್ಥಿಯಾಗಿರುವ ಧ್ರುವ್, ಮಾನಸಿಕ ಖಿನ್ನತೆಗೆ ಔಷಧಿಗಳನ್ನು ಪಡೆಯುತ್ತಿದ್ದ. ಈ ಬಗ್ಗ ಆತನ ಕುಟುಂಬಸ್ಥರಿಗೂ ತಿಳಿದಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಾಗರಭಾವಿಯ ಕಾಲೇಜು ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಧ್ರುವ್, ಆತ್ಮಹತ್ಯೆ ಬಗ್ಗೆ ಕಾಲೇಜು ಸ್ನೇಹಿತರೊಂದಿಗೆ ಆಗಾಗ್ಗೆ ಹೇಳಿಕೊಳ್ಳುತ್ತಿದ್ದ. ನಿನ್ನೆ ಮೆಟ್ರೋ ಹಳಿಗೆ ಹಾರುವುದಕ್ಕೂ ಮುನ್ನ ಪೋಷಕರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿದ್ದು, ತನ್ನ ಜೀವನ ಅರ್ಥಹೀನ ಎಂದು ಹೇಳಿಕೊಂಡಿದ್ದಾನೆ. ಈ ವೇಳೆ ಪೋಷಕರು ಕಬ್ಬನ್ ಪಾರ್ಕ್'ಗೆ ಹೋಗಿ ಕೆಲ ಕಾಲ ಸಮಯ ಕಳೆಯುವಂತೆಯೂ ಹೇಳಿದ್ದಾರೆ. ನಂತರ ಫೋನ್ ಕಟ್ ಮಾಡಿರುವ ಧ್ರುವ್ ತನ್ನ ಲೊಕೇಷನ್ ನನ್ನು ಪೋಷಕರಿಗೆ ವಾಟ್ಸಾಪ್ ಮೂಲಕ ಹಂಚಿಕೊಂಡು, ಹಳಿಗೆ ಹಾರಿದ್ದಾನೆ.

ನಂತರ ಧ್ರುವ್ ಪೋಷಕರಿಗೆ ಮಗನನನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಬಳಿಕ ಆತನ ಸ್ನೇಹಿತರಿಗೆ ಕರೆ ಮಾಡಿ, ಮಗನಿರುವ ಸ್ಥಳಕ್ಕೆ ಹೋಗಿ ಪರಿಶೀಲಿಸುವಂತೆ ತಿಳಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆತ ಆತ್ಮಹತ್ಯೆಗೆ ಶರಣಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್‌ಎಲ್‌ಎಸ್‌ಐಯು ಉಪಕುಲಪತಿ ಸುಧೀರ್ ಕೃಷ್ಣಸ್ವಾಮಿ ಅವರು ಮಾತನಾಡಿ, ವಿದ್ಯಾರ್ಥಿಯೊಬ್ಬನ ಹಠಾತ್ ಮತ್ತು ಅನಿರೀಕ್ಷಿತ ನಿಧನದಿಂದ ವಿಶ್ವವಿದ್ಯಾನಿಲಯವು ತೀವ್ರ ಆಘಾತ ಮತ್ತು ದುಃಖಿತವಾಗಿದೆ. ಗೌರವಾರ್ಥವಾಗಿ, ವಿಶ್ವವಿದ್ಯಾನಿಲಯವು ವಾರದ ಉಳಿದ ಅವಧಿಗೆ ತರಗತಿಗಳನ್ನು ಸ್ಥಗಿತಗೊಳಿಸುತ್ತದೆ ಎಂದು ಹೇಳಿದ್ದಾರೆ, ಘಟನೆ ಸಂಬಂಧ ಚಂದ್ರಾ ಲೇಔಟ್ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!