ಹೈಕೋರ್ಟ್‌ 
ರಾಜ್ಯ

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.

ಬೆಂಗಳೂರು: ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.

ಸ್ಥಗಿತಗೊಂಡಿದ್ದ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಮುಂದಿನ ವರ್ಷದ ಪರೀಕ್ಷೆಯ ವೇಳೆಯೊಳಗೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಲು ಹೈಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.

ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. ರಾಜೇಶ್ ರೈ ಅವರು ಇರುವ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. ಸರ್ಕಾರದ ಮೇಲ್ಮನವಿ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಹೈಕೋರ್ಟ್ ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು.

ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ನಡೆ ನೀಡಿತ್ತು. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ವಾದ ಪ್ರತಿವಾದ ಆಲಿಸಿದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿತ್ತು.

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರ ಕುರಿತಂತೆ ಅನಿಶ್ಚಿತತೆ ಮುಂದುವರೆದಿತ್ತು. ಪರೀಕ್ಷೆ ರದ್ದಾಗುತ್ತದೆಯೇ ಅಥವಾ ನಡೆಯುತ್ತದೆಯೇ ಎಂಬುದರ ಕುರಿತಾಗಿ ಗೊಂದಲ ಮುಂದುವರೆದಿದ್ದು, ಮಕ್ಕಳು ಮತ್ತು ಪೋಷಕರ ಸ್ಥಿತಿ ಅಯೋಮಯವಾಗಿತ್ತು. ಇದೀಗ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿ ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಎಳೆದಿದೆ.

5, 8 ಮತ್ತು 9ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಸೋಮವಾರದಿಂದಲೇ ನಡೆಸುವ ಬಗ್ಗೆ ಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ. ಈಗಾಗಲೇ ಐದನೇ ತರಗತಿ ನಾಲ್ಕು ವಿಷಯಗಳ‌ ಪರೀಕ್ಷೆ ಮುಗಿದಿವೆ. 8 ಹಾಗೂ 9 ತರಗತಿಗಳ ಎರಡೆರಡು ವಿಷಯಗಳ ಪರೀಕ್ಷೆ ನಡೆದಿವೆ.

ಅರ್ಜಿದಾರರ ಪರ ವಕೀಲರು ವಿಭಾಗೀಯ ಪೀಠದ ಮುಂದೆ ವಾದ ಮಂಡಿಸಿ, 1 ರಿಂದ 8 ನೇ ತರಗತಿ, ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು ಕಾಯಿದೆಯ ಪ್ರಕಾರ, ಕರ್ನಾಟಕ ಶಿಕ್ಷಣ ಕಾಯ್ದೆಯಡಿ ನಿಯಮಾವಳಿ ರೂಪಿಸದೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಸೂಚನೆ ಹೊರಡಿಸುವ ಅಧಿಕಾರವಿಲ್ಲ ಮತ್ತು ರಾಜ್ಯವು ಪ್ರಾಥಮಿಕ ಶಿಕ್ಷಣದ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ.

ಕರ್ನಾಟಕ ಶಿಕ್ಷಣ ಕಾಯ್ದೆಯ ನಿಬಂಧನೆಗಳ ಪ್ರಕಾರ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುವ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸುವ ಮೊದಲು ರಾಜ್ಯ ಸರ್ಕಾರವು ಪೋಷಕರು, ಶಿಕ್ಷಕರು ಮತ್ತು ಶಾಲೆಗಳನ್ನು ಸಂಪರ್ಕಿಸಬೇಕು ಎಂದು ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘ ವಾದಿಸಿದೆ. ಶಿಕ್ಷಣ ಹಕ್ಕು ಕಾಯಿದೆಯು 6 ರಿಂದ 14 ವರ್ಷದೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ಅನುಮತಿಸುವುದಿಲ್ಲ ಎಂದಿದೆ.

ಆದಾಗ್ಯೂ, ರಾಜ್ಯ ಸರ್ಕಾರವು 5, 8, 9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ. ಏಕ ಸದಸ್ಯ ಪೀಠ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವ ಮೊದಲು, 11 ನೇ ತರಗತಿಯ ಪರೀಕ್ಷೆಗಳನ್ನು ಮುಕ್ತಾಯಗೊಳಿಸಲಾಯಿತು. ಹೀಗಾಗಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಳಿಸುವಂತೆ ವಿಭಾಗೀಯ ಪೀಠ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!