ಕೋಟಾ ಶ್ರೀನಿವಾಸ ಪೂಜಾರಿ  
ರಾಜ್ಯ

ಚಿಕ್ಕಮಗಳೂರು: ಕೋಟಾ ಶ್ರೀನಿವಾಸ ಪೂಜಾರಿಗೆ 25 ಸಾವಿರ ರೂ. ಹಣ ದೇಣಿಗೆ ನೀಡಿದ ಚುರುಮುರಿ ವ್ಯಾಪಾರಿ!

ಸರಳತೆಯಿಂದಲೇ ಗಮನ ಸೆಳೆಯುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ವಿಶೇಷ ವ್ಯಕ್ತಿಯೊಬ್ಬರು ದೇಣಿಗೆ ನೀಡಿದ್ದಾರೆ.

ಚಿಕ್ಕಮಗಳೂರು: ಸರಳತೆಯಿಂದಲೇ ಗಮನ ಸೆಳೆಯುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ವಿಶೇಷ ವ್ಯಕ್ತಿಯೊಬ್ಬರು ದೇಣಿಗೆ ನೀಡಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ಚುನಾವಣಾ ಖರ್ಚಿಗೆ ಚುರುಮುರಿ ವ್ಯಾಪಾರಿಯೊಬ್ಬರು 25,000 ರೂ ನೀಡಿದ್ದಾರೆ.

ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ 25,000 ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.

ಕೋಟಾ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರು ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಪ್ರಚಾರಕ್ಕೆಂದು ಹೋದಾಗ ಚಿಕ್ಕಮಗಳೂರು ಹೊರವಲಯದ ತೇಗೂರು ಸರ್ಕಲ್ ನಲ್ಲಿನ ಚುರುಮುರಿ ವ್ಯಾಪಾರಿ ಲೊಕೇಶ್ ಬಾಬು ಅವರು ಕೋಟಾಗೆ 25 ಸಾವಿರ ಹಣವನ್ನ ಚುನಾವಣಾ ಖರ್ಚಿಗಾಗಿ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ. ಹಣದ ಜೊತೆ ಎಲೆ-ಅಡಿಕೆ-ಬಾಳೆಹಣ್ಣು ಸೇರಿ ವಿವಿಧ ಹಣ್ಣುಗಳನ್ನ ನೀಡಿ ಚುನಾವಣೆಗೆ ಶುಭಕೋರಿದ್ದಾರೆ.

ಕಳೆದ 25 ವರ್ಷಗಳಿಂದ ತೇಗೂರು ಸರ್ಕಲ್ ನಲ್ಲಿ ಚುರುಮುರಿ ಅಂಗಡಿ ಇಟ್ಟಿರುವ ಲೊಕೇಶ್ ಬಿಜೆಪಿಯ ಅಪ್ಪಟ ಕಾರ್ಯಕರ್ತ. ಇಂದು ಕೋಟಾ ಪ್ರತಿಯೊಂದು ಅಂಗಡಿಗಳಿಗೆ ಹೋಗಿ ಮತಯಾಚನೆ ಮಾಡುವ ವೇಳೆ ಹಣ ನೀಡಿ ಶುಭಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್