ಸೋನು ಗೌಡ ಹಾಗೂ ಮಗು 
ರಾಜ್ಯ

ಕಾನೂನು ಬಾಹಿರವಾಗಿ ಮಗು ದತ್ತು ಪ್ರಕರಣ: ರೀಲ್ಸ್ ಸ್ಟಾರ್ ಸೋನು ಗೌಡ ನಾಲ್ಕು ದಿನ ಪೊಲೀಸ್ ವಶಕ್ಕೆ

ಬಿಗ್ ಬಾಸ್‌ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರನ್ನು ಶುಕ್ರವಾರ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಬಿಗ್ ಬಾಸ್‌ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರನ್ನು ಶುಕ್ರವಾರ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ಬ್ಯಾಡರಹಳ್ಳಿ ಪೊಲೀಸರು ಇಂದು ಸೋನು ಗೌಡ ಅವರನ್ನು ಬೆಂಗಳೂರಿನ ಸಿಜೆಎಂ ಕೋರ್ಟ್ ಗೆ ಹಾಜರುಪಡಿಸಿದರು. ಮಗು ಪೋಷಕರನ್ನು ರಾಯಚೂರಿಗೆ ಕರೆದುಕೊಂಡು ಹೋಗಿ ಮಹಜರು ಮತ್ತು ಹೇಳಿಕೆ ಪಡೆಯಬೇಕಿದೆ. ಅಪಾರ್ಟ್ ಮೆಂಟ್ ನ ಅಕ್ಕಪಕ್ಕದ ಸ್ಥಳೀಯರ ಹೇಳಿಕೆ ಪಡೆಯಬೇಕಿದೆ. ಈ ಉದ್ದೇಶ ದಿಂದ ನಾಲ್ಕು ದಿನಗಳ ಕಾಲ ತಮ್ಮ ಕಸ್ಟಡಿ ನೀಡುವಂತೆ ಪೊಲೀಸರು ಮನವಿ ಮಾಡಿದರು.

ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್, ಆರೋಪಿ ಸೋನು ಗೌಡ ಅವರನ್ನು ಮಾರ್ಚ್ 25ರ ವರೆಗೆ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.

ಈ ವರ್ಷದ ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಸೋನು ಗೌಡ ಅವರನ್ನು ಇಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಸೋನು ಗೌಡರನ್ನು ವಶಕ್ಕೆ ಪಡೆದಿದ್ದಾರೆ.

ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. 8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT