ಬಿಡಬ್ಲ್ಯುಎಸ್ ಎಸ್ ಬಿ 
ರಾಜ್ಯ

ವಿಶ್ವ ಜಲ ದಿನ: ಹೊಟೇಲ್ ಗಳಿಗೆ ಗ್ರೀನ್ ಸ್ಟಾರ್ ಚಾಲೆಂಜ್ ಪರಿಚಯಿಸಿದ BWSSB

ವಿಶ್ವ ಜಲ ದಿನವನ್ನು ವಿನೂತನವಾಗಿ ಆಚರಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನಿನ್ನೆ ಶುಕ್ರವಾರ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗಾಗಿ ಗ್ರೀನ್ ಸ್ಟಾರ್ ಚಾಲೆಂಜ್ ಸ್ಪರ್ಧೆಯನ್ನು ಪರಿಚಯಿಸಿದೆ.

ಬೆಂಗಳೂರು: ವಿಶ್ವ ಜಲ ದಿನವನ್ನು ವಿನೂತನವಾಗಿ ಆಚರಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನಿನ್ನೆ ಶುಕ್ರವಾರ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗಾಗಿ ಗ್ರೀನ್ ಸ್ಟಾರ್ ಚಾಲೆಂಜ್ ಸ್ಪರ್ಧೆಯನ್ನು ಪರಿಚಯಿಸಿದೆ. ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ನೀರು ಉಳಿಸುವ ಏರೇಟರ್‌ಗಳನ್ನು ಅಳವಡಿಸುವ ಮೂಲಕ ಗ್ರೀನ್ ಸ್ಟಾರ್ ಚಾಲೆಂಜ್‌ಗೆ ಸಾಂಕೇತಿಕವಾಗಿ ಚಾಲನೆ ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ರೆಸ್ಟೋರೆಂಟ್‌ ಮತ್ತು ಹೋಟೆಲ್‌ಗಳು ನೀರು ಉಳಿಸುವ ತಂತ್ರಜ್ಞಾನ, ಸಂಸ್ಕರಿಸಿದ ನೀರಿನ ಬಳಕೆ ಹೆಚ್ಚಿಸುವುದು, ಕೊಳವೆಬಾವಿಗಳ ಬಳಕೆಯಲ್ಲಿ ತಂತ್ರಜ್ಞಾನ ಅಳವಡಿಕೆ, ಮಳೆ ನೀರಿನ ಇಂಗುಗಳನ್ನು ಅಳವಡಿಸಿಕೊಳ್ಳುವುದು ಮತ್ತು ಗ್ರಾಹಕರಿಗೆ ಮಾಹಿತಿ ನೀಡುವ ಮೂಲಕ ನೀರಿನ ಉಳಿತಾಯದ ಮಹತ್ವವನ್ನು ತಿಳಿಸುತ್ತದೆ. 30 ದಿನಗಳ ಒಳಗೆ ಸಿಬ್ಬಂದಿಗೆ BWSSB ಗ್ರೀನ್ ಸ್ಟಾರ್ ರೇಟಿಂಗ್ ನೀಡಲಿದೆ.

ಶುಕ್ರವಾರದಿಂದ 30 ದಿನಗಳ ಕಾಲ ಹೋಟೆಲ್‌ಗಳ ನೀರಿನ ಬಳಕೆಯ ಮೇಲೆ ನಿಗಾ ಇಡುತ್ತೇವೆ. ಗ್ರೀನ್ ಸ್ಟಾರ್ ರೇಟಿಂಗ್ ಪಡೆಯಲು ಬಯಸುವ ಹೋಟೆಲ್‌ಗಳು ಅದರ ಬಗ್ಗೆ ಮಂಡಳಿಗೆ ತಿಳಿಸಬೇಕು. ಮಂಡಳಿಯು ಐದು ಪಟ್ಟಿ ಮಾಡಲಾದ ಸೂತ್ರಗಳ ಆಧಾರದ ಮೇಲೆ ಹೋಟೆಲ್‌ಗಳನ್ನು ಪರಿಶೀಲಿಸುತ್ತದೆ ಮತ್ತು ನಂತರ ರೇಟಿಂಗ್ ನ್ನು ನಿರ್ಧರಿಸುತ್ತದೆ ಎಂದು ಅವರು ಹೇಳಿದರು.

ಬೆಂಗಳೂರಿನ ಹೃದಯ ಭಾಗ ಮತ್ತು ಇತರ ಪ್ರಮುಖ ಪ್ರದೇಶಗಳಲ್ಲಿ ನೀರಿನ ಬಿಕ್ಕಟ್ಟು ಗಣನೀಯವಾಗಿ ಕಡಿಮೆಯಾಗಿದೆ. ಮೊದಲ ಹಂತದಲ್ಲಿ ಪ್ರತಿನಿತ್ಯ 300ಕ್ಕೂ ಹೆಚ್ಚು ದೂರುಗಳು ದಾಖಲಾಗುತ್ತಿದ್ದವು ಆದರೆ ಈಗ ಆ ಸಂಖ್ಯೆ 100ಕ್ಕೆ ಇಳಿದಿದೆ ಎಂದ ಅಧ್ಯಕ್ಷರು, ದೂರುಗಳ ಸಂಖ್ಯೆಯನ್ನು ಮತ್ತಷ್ಟು ಕಡಿಮೆ ಮಾಡುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT