ಜಯಪ್ರಕಾಶ್ ಹೆಗ್ಡೆ(ಸಂಗ್ರಹ ಚಿತ್ರ) 
ರಾಜ್ಯ

ಭಾಷಾ ಸಂಘರ್ಷ: ಹೆಗ್ಡೆ ಹೇಳಿಕೆ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಕಿಡಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಇತ್ತೀಚೆಗೆ, ತಮ್ಮ ಎದುರಾಳಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಗುರಿಯಾಗಿರಿಸಿಕೊಂಡು ನೀಡಿದ್ದ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಇತ್ತೀಚೆಗೆ, ತಮ್ಮ ಎದುರಾಳಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಗುರಿಯಾಗಿರಿಸಿಕೊಂಡು ನೀಡಿದ್ದ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬ್ರಹ್ಮಾವರದಲ್ಲಿ ಮಾತನಾಡಿದ್ದ ಜಯಪ್ರಕಾಶ್ ಹೆಗ್ಡೆ, ಓರ್ವ ಸಂಸದೀಯ ಪಟುವಿಗೆ ಹಿಂದಿ ಹಾಗೂ ಇಂಗ್ಲೀಷ್ ಭಾಷಾ ಜ್ಞಾನ ಅತ್ಯಗತ್ಯವಾದದ್ದು ಎಂದು ಹೇಳಿದ್ದರು. ಇದು ತಮ್ಮ ರಾಜಕೀಯ ವಿರೋಧಿ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಟಾರ್ಗೆಟ್ ಮಾಡಿದ್ದರು.

ಜಯಪ್ರಕಾಶ್ ಹೆಗ್ಡೆ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಬಿಜೆಪಿ, ಕಾಂಗ್ರೆಸ್ ಕನ್ನಡ ವಿರೋಧಿ ನಿಲುವನ್ನು ಹೊಂದಿದೆ ಎಂದು ಹೇಳಿದೆ. ಇದು ಸುದ್ದಿಯಾಗುತ್ತಿದ್ದಂತೆಯೇ ಜಯಪ್ರಕಾಶ್ ಹೆಗ್ಡೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿ, 6 ತಿಂಗಳಲ್ಲಿ ಹಿಂದಿ ಕಲಿತು ಸಂಸತ್ ನಲ್ಲಿ ನಿರರ್ಗಳವಾಗಿ ಮಾತನಾಡುವುದಾಗಿ ಹೇಳಿದ್ದಾರೆ.

ತಮ್ಮ ಹೇಳಿಕೆ ಪಕ್ಷಕ್ಕೆ ಹಾನಿ ಉಂಟುಮಾಡಬಹುದೆಂದು ಅರಿತ ಜಯಪ್ರಕಾಶ್ ಹೆಗ್ಡೆ ಮಾಧ್ಯಮಗಳು ತಮ್ಮ ಹೇಳಿಕೆಯನ್ನು ತಿರುಚಿವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿಯವರ ಭಾಷಾ ಕೌಶಲ್ಯದ ಬಗ್ಗೆ ನಾನು ಯಾವತ್ತೂ ಮಾತನಾಡಿಲ್ಲ ಎಂದು ಹೆಗ್ಡೆ ತಮ್ಮ ಸ್ಪಷ್ಟನೆಯಲ್ಲಿ ತಿಳಿಸಿದ್ದಾರೆ. ''ನನ್ನ ಇಡೀ ರಾಜಕೀಯ ಜೀವನದಲ್ಲಿ ನಾನು ಯಾರ ಬಗ್ಗೆಯೂ ಕೆಟ್ಟದಾಗಿ ಮಾತನಾಡಿಲ್ಲ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಭಾಷಾಂತರಕಾರರ ಸೇವೆ ಇರುವುದರಿಂದ ಸದನದ ಸದಸ್ಯರು ಕನ್ನಡದಲ್ಲೂ ಮಾತನಾಡಬಹುದು ಎಂದು ಹೇಳಿದ್ದೆ. ಆದರೆ ಅಧಿಕಾರಶಾಹಿಗಳೊಂದಿಗೆ ಕೆಲಸ ಮಾಡಲು, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತನಾಡಲು ತಿಳಿದಿರುವ ಅವಶ್ಯಕತೆ ಉಂಟಾಗುತ್ತದೆ. ನಾನು ಈ ಹಿಂದೆ ಸಂಸದನಾಗಿ ಕೆಲಸ ಮಾಡಿದ ಅನುಭವದ ಆಧಾರದ ಮೇಲೆ ಹೇಳಿದ್ದೇನೆ ಮತ್ತು ನನ್ನ ಹೇಳಿಕೆಗೆ ಬೇರೆ ಉದ್ದೇಶವಿಲ್ಲ. ಈಗ ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನಗಳು ನಡೆಯುತ್ತಿವೆ ಎಂದರು. ನಾನು ಗೌರವಯುತವಾಗಿ ಚುನಾವಣೆಯಲ್ಲಿ ಹೋರಾಡುತ್ತೇನೆ ಮತ್ತು ಕಣದಲ್ಲಿರುವ ನನ್ನ ಎದುರಾಳಿಗೂ ಗೌರವ ನೀಡುತ್ತೇನೆ ಎಂದು ಜೆ.ಪಿ ಹೇಳಿದ್ದಾರೆ.

ರಾಜ್ಯ ಬಿಜೆಪಿಯ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಸ್ಥಳೀಯ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿ ವರದಿಯನ್ನು ಲಗತ್ತಿಸಿ ಕನ್ನಡ ಭಾಷೆಯನ್ನು ಅವಮಾನಿಸುತ್ತಿರುವ ಕಾಂಗ್ರೆಸ್‌ನ ನಿಜವಾದ ಮುಖ ಈಗ ಹೊರಬಿದ್ದಿದೆ. ಇದು ಕೋಟಿಗಟ್ಟಲೆ ಕನ್ನಡಿಗರನ್ನು ನಾಚಿಸುವುದರ ಹೊರತು ಬೇರೇನೂ ಅಲ್ಲ ಎಂದು ಆರೋಪಿಸಿದೆ.

ಕಾಂಗ್ರೆಸ್‌ನಿಂದ ಜಯಪ್ರಕಾಶ್ ಹೆಗ್ಡೆ ಅಭ್ಯರ್ಥಿಯಾಗಿ ಮುಂದುವರಿಯಲು ಸಿಎಂ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡುತ್ತೀರಾ ಎಂದು ಪೋಸ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಕನ್ನಡ ಮಾತೃಭಾಷೆಯಾಗಿದ್ದರೆ, ಅಭ್ಯರ್ಥಿ ಸಂಸದರಾಗಲು ಅರ್ಹರಲ್ಲ ಎಂಬ ಅಭಿಪ್ರಾಯವನ್ನು ಹೊಂದಿರುವುದು ಕಾಂಗ್ರೆಸ್ ಪರಿಸರ ವ್ಯವಸ್ಥೆಯ ದಿಟ್ಟತನ ಎಂದು ಬಿಜೆಪಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT