25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ
ಮಂಗಳೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತ ಮನ್ಸೂರ್ ಅಲಿ ಅವರು ಶನಿವಾರ 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತ ಮನ್ಸೂರ್ ಅಲಿ ಅವರು ಶನಿವಾರ 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇಂದು ಮಂಗಳಾ ಕ್ರೀಡಾಂಗಣದ ಬಳಿ ಟಿಡಿಆರ್ ಕ್ಲಿಯರೆನ್ಸ್ ಮಾಡಲು ಉದ್ಯಮಿ ಗಿರಿಧರ್ ಶೆಟ್ಟಿ ಅವರಿಂದ 25 ಲಕ್ಷ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಮನ್ಸೂರ್ ಅಲಿ ಮತ್ತು ದಲ್ಲಾಳಿ ಸಲೀಂ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದ ಅಧಿಕಾರಿಗಳು ದಿಢೀರ್ ದಾಳಿ ಮಾಡಿ, ಮುಡಾ ಆಯುಕ್ತ ಮನ್ಸೂರ್ ಅಲಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆಯುಕ್ತ ಮನ್ಸೂರ್ ಅಲಿ ಜೊತೆಗೆ ಬ್ರೋಕರ್ ಸಲೀಂ ಎಂಬುವವರನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.