ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ 
ರಾಜ್ಯ

ಲೋಕಸಭೆ ಚುನಾವಣೆ: ರೌಡಿಶೀಟರ್‌ಗಳ ಮನೆ ಮೇಲೆ ದಾಳಿ; ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡದಂತೆ ಸೂಚನೆ

Ramyashree GN

ಬೆಂಗಳೂರು: ಪಶ್ಚಿಮ ವಿಭಾಗದ ಪೊಲೀಸರು ಶನಿವಾರ ಬೆಳಗ್ಗೆ 326 ರೌಡಿ ಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಕಾಟನ್‌ಪೇಟೆ, ಕಲಾಸಿಪಾಳ್ಯ, ಜೆಜೆ ನಗರ ಮತ್ತು ಇತರ ಕಡೆಗಳಲ್ಲಿ ಮುಂಜಾನೆ ದಾಳಿ ನಡೆಸಲಾಯಿತು. ಮತದಾನದ ವೇಳೆ ರೌಡಿಗಳು ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗಿದೆ.

ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ದಾಳಿ ನಡೆಸಲಾಗಿದ್ದು, ದಾಳಿ ನಡೆಸಿದ ಮನೆಗಳಲ್ಲಿ ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿಲ್ಲ. ಮುಂಬರುವ ಲೋಕಸಭೆ ಸಂಸತ್ತಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮವಾಗಿ 19 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ 231 ರೌಡಿಗಳು ಮನೆಯಲ್ಲಿದ್ದರು. ಪೊಲೀಸರು ಬೆರಳಚ್ಚು ಪಡೆದುಕೊಂಡಿದ್ದಾರೆ. ದಾಳಿಯ ವೇಳೆ ಸುಮಾರು 95 ರೌಡಿಗಳು ಮನೆಯಲ್ಲಿರಲಿಲ್ಲ ಮತ್ತು ಅವರ ಮೇಲೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಅವರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದಿದ್ದಾರೆ.

ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿದ್ದು, ಪಶ್ಚಿಮ ವಿಭಾಗದ ಡಿಸಿಪಿ ನಿರ್ದೇಶನದ ಮೇರೆಗೆ ದಾಳಿ ನಡೆಸಲಾಗಿದೆ.

ದಕ್ಷಿಣ ವಿಭಾಗದ ಪೊಲೀಸರು ಗುರುವಾರ 234ಕ್ಕೂ ಹೆಚ್ಚು ರೌಡಿಶೀಟರ್‌ಗಳ ನಿವಾಸಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವುದನ್ನು ಸ್ಮರಿಸಬಹುದಾಗಿದೆ. ಜಯನಗರ, ಜೆಪಿ ನಗರ, ಸಿದ್ದಾಪುರ, ಬನಶಂಕರಿ, ಪುಟ್ಟೇನಹಳ್ಳಿ, ಸುಬ್ರಹ್ಮಣ್ಯಪುರ, ಕೋಣನಕುಂಟೆ, ತಲಘಟ್ಟಪುರ, ಗಿರಿನಗರ ಸೇರಿದಂತೆ 16 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ.

SCROLL FOR NEXT