ರಾಜ್ಯ

'ತೆಲಂಗಾಣ ಸಿಎಂ ರೇವಂತ್ ರೆಡ್ಡಿಯವರನ್ನು ನೋಡಿ ಕಲಿಯಿರಿ ಸಿದ್ದರಾಮಯ್ಯನವರೇ': ಆರ್ ಅಶೋಕ್

Sumana Upadhyaya

ಬೆಂಗಳೂರು: ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ರಾಜ್ಯ ಸರ್ಕಾರವನ್ನು ಪ್ರತಿಪಕ್ಷ ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

ಇದು ರಾಜಕೀಯ ಪ್ರೇರಿತ ನಿರ್ಧಾರ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ವ್ಯಾಖ್ಯಾನಿಸಿದ್ದು, ಕರ್ನಾಟಕದ ಇತಿಹಾಸದಲ್ಲಿ ಇದೊಂದು ಕರಾಳ ದಿನ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಎಲ್ಲ ತಪ್ಪುಗಳಿಗೆ ಕೇಂದ್ರದತ್ತ ಬೊಟ್ಟು ಮಾಡುವುದೊಂದೇ ಕೆಲಸ ಎಂದು ಭಾವಿಸುತ್ತಾರೆ ಎಂದು ಹೇಳಿದರು.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರದೊಂದಿಗೆ ಹೇಗೆ ಕೆಲಸ ಮಾಡಬೇಕು ಎಂಬುದನ್ನು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಯಿಂದ ಸಿದ್ದರಾಮಯ್ಯನವರು ಕಲಿಯಬೇಕು ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

ಚುನಾವಣೆ ನಂತರ, ರಾಜ್ಯದ ಆಡಳಿತದ ಮೇಲೆ ಕೇಂದ್ರೀಕರಿಸಲು ಮತ್ತು ಜನರ ಹಿತಾಸಕ್ತಿಗಳನ್ನು ಕಾಪಾಡಲು ರಾಜಕೀಯವನ್ನು ಬದಿಗಿರಿಸಿ ಎಂದು ಅಶೋಕ ಹೇಳಿದರು. ರಾಜಕೀಯ ಲಾಭಕ್ಕಾಗಿ ಜನರ ಹಿತಾಸಕ್ತಿಗಳನ್ನು ಬಲಿಕೊಡುವುದು ಒಳ್ಳೆಯದಲ್ಲ, ಇತಿಹಾಸವು ಸಿದ್ದರಾಮಯ್ಯನವರನ್ನು ಕ್ಷಮಿಸುವುದಿಲ್ಲ ಎಂದು ಆರ್ ಅಶೋಕ್ ಹೇಳಿದರು.

SCROLL FOR NEXT