ಸೋನು ಗೌಡ ಕರೆತಂದು ಸ್ಥಳ ಮಹಜರು ನಡೆಸುತ್ತಿರುವುದು 
ರಾಜ್ಯ

ಸೋನು ಗೌಡ ಬಂಧನ ಪ್ರಕರಣ: ರಾಯಚೂರಿಗೆ ತೆರಳಿ ಬಾಲಕಿ ಮನೆಯಲ್ಲಿ ಸ್ಥಳ ಮಹಜರು ನಡೆಸಿದ ಪೊಲೀಸರು

ಗ್ರಾಮಸ್ಥರ ಆಕ್ರೋಶ, ಸೋನು ಗೌಡ ಮೇಲೆ ಮುತ್ತಿಗೆ ಯತ್ನ

ರಾಯಚೂರು: ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿರುವ ಸೋನು ಶ್ರೀನಿವಾಸಗೌಡರನ್ನು (Sonu Srinivas Gowda) ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ಇಂದು (ಮಾ.24) ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ಮಾಡಿದ್ದಾರೆ. ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದರು. ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದಾರೆ.

ಸ್ಥಳ ಮಹಜರು ಮಾಡಲು ಪೋಲಿಸರು ಭೇಟಿ ನೀಡಿದ ಬಳಿಕ ಸೋನು ಗೌಡ ಜೊತೆ ಮಾತನಾಡಬೇಕು ಅಂತ ಗ್ರಾಮಸ್ಥರು ಗಲಾಟೆ ಮಾಡಿದರು. ಪೊಲೀಸ್ ಕಾರಿಗೆ ಮುತ್ತಿಗೆ ಹಾಕಿ ಸೋನು ಗೌಡರನ್ನು ನೋಡಲು ನೂಕುನುಗ್ಗಲು ಮಾಡಿದರು. ಗ್ರಾಮಸ್ಥರು ಹಾಗೂ ಬಾಲಕಿ ಸಂಬಂಧಿಕರಿಂದ ಮಾಹಿತಿ ಪಡೆದ ಪೊಲೀಸರು ಸುಮಾರು ಇಪ್ಪತ್ತು ನಿಮಿಷಗಳಲ್ಲಿ ಸ್ಥಳ ಮಹಜರು ಮುಗಿಸಿ ವಾಪಸ್ ತೆರಳಿದ್ದಾರೆ.

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಗುವಿನ ಚಿಕ್ಕಪ್ಪ ಸೋನುಗೌಡ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವನ್ನು ನಾವು ದತ್ತು ನೀಡಿಲ್ಲ, ಆಕೆ ನಮಗೆ ಯಾವುದೇ ಹಣದ ಸಹಾಯ ಮಾಡಿಲ್ಲ. ನಮ್ಮ ಮಗಳನ್ನು ಓದಿಸುತ್ತೇನೆ. ಚೆನ್ನಾಗಿ ಸಾಕುತ್ತೇನೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ. ಈಗ ದತ್ತು ತೆಗೆದುಕೊಂಡಿದ್ದೇನೆ ಅಂತ ಹೇಳಿರುವುದು ಸರಿಯಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!