ಘಟನಾ ಸ್ಥಳ 
ರಾಜ್ಯ

ಮಂಡ್ಯದಲ್ಲಿ ಪಟಾಕಿ ದುರಂತ: ಓರ್ವ ಕಾರ್ಮಿಕ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ!

ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ಸಂಗ್ರಹಿಸಿಟ್ಟಿದ್ದ ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಮಂಡ್ಯ: ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ಸಂಗ್ರಹಿಸಿಟ್ಟಿದ್ದ ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಮೃತನನ್ನು ತಮಿಳುನಾಡು ಮೂಲದ 67 ವರ್ಷದ ರಮೇಶ್ ಎಂದು ತಿಳಿದುಬಂದಿದೆ. ನಾಗಲಿಂಗ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಬ್ಬಳ್ಳಿ ಗ್ರಾಮದಲ್ಲಿ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಾಲ್ವರು ಆಗಮಿಸಿದ್ದರು. ನಿನ್ನೆ ರಾತ್ರಿ ಗ್ರಾಮದಲ್ಲಿ ಹಬ್ಬ ಮುಗಿದ ನಂತರ ಆಲೆಮನೆಯೊಂದರಲ್ಲಿ ನಾಲ್ವರು ಮಲಗಿದ್ದರು. ಇಂದು ಬೇರೊಂದು ಗ್ರಾಮಕ್ಕೆ ಹೋಗಲು ಪಟಾಕಿಗಳ ತುಂಬುವಾಗ ಸ್ಪೋಟ ಸಂಭವಿಸಿದೆ.

ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಇನ್ನು ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ್, ಎಸ್ ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!