ಸಾಂದರ್ಭಿಕ ಚಿತ್ರ 
ರಾಜ್ಯ

ಯಾದಗಿರಿ: ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು; ಮೊದಲ ದಿನವೇ ಇಬ್ಬರು ಶಿಕ್ಷಕರ ಅಮಾನತು

2023-24ನೇ ಸಾಲಿನ ಎಸ್​​ಎಸ್​​ಎಲ್​ಸಿ ವಾರ್ಷಿಕ ಪರೀಕ್ಷೆ ಸೋಮವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಲಾಗಿದೆ.

ಯಾದಗಿರಿ: 2023-24ನೇ ಸಾಲಿನ ಎಸ್​​ಎಸ್​​ಎಲ್​ಸಿ ವಾರ್ಷಿಕ ಪರೀಕ್ಷೆ ಸೋಮವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ, ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್​ಗೌಡ ಮತ್ತು ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಝಂಡದಕೇರಾ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಅವರನ್ನು ಅಮಾನತು ಮಾಡಲಾಗಿದೆ.

ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ ಆರೋಪದ ಮೇಲೆ ಈ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಗರೀಮಾ ಪನ್ವಾರ್ ಅವರು ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಮೇಲ್ವಿಚಾರಕರು ಕ್ರಮಕೈಗೊಂಡಿರಲಿಲ್ಲ. ಮುಖ್ಯ ಅಧೀಕ್ಷಕರ ಗಮನಕ್ಕೂ ತರದೆ ಪರೀಕ್ಷಾ ಮೇಲ್ವಿಚಾರಕರು ನಿರ್ಲಕ್ಷಿಸಿದ್ದಾರೆ. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರ ಅಮಾನತು ಮಾಡಲಾಗಿದೆ. ಅಲ್ಲದೆ ಒಬ್ಬ ವಿದ್ಯಾರ್ಥಿಯನ್ನು ಸಹ ಡಿಬಾರ್ ಮಾಡಲಾಗಿದೆ.

ಯದಗಿರಿ ಜಿಲ್ಲೆಯ 59 ಪರೀಕ್ಷಾ ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆದಿದೆ. ಜಿಲ್ಲೆಯಲ್ಲಿ 44 ಸಾಮಾನ್ಯ, 9 ಸೂಕ್ಷ್ಮ ಹಾಗೂ 6 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 59 ಪರೀಕ್ಷಾ ಕೇಂದ್ರಗಳಲ್ಲಿ 19575 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel