ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧ; ಗೋಡೆ ಮೇಲೆ ಡೆತ್ ನೋಟ್ ಬರೆದು ಟೆಕ್ಕಿ ಆತ್ಮಹತ್ಯೆ

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ಮೃತ ಟೆಕ್ಕಿಯನ್ನು ಸೈಯ್ಯದ್ ಅಕ್ಮಲ್ ಅನ್ಸರ್ ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರು ಮಕ್ಕಳಾದ ಬಳಿಕ ಮಹಿಳೆ ಅಕ್ರಮ ಸಂಬಂಧ ಇಟ್ಟುಕೊಂಡು ಪತಿಗೆ ನಿರಂತರ ಕಿರುಕುಳ ನೀಡುತ್ತಿದ್ದಳು. ಇದೇ ಕಾರಣಕ್ಕೆ ಬೇಸತ್ತು, ಗೋಡೆಯ ಮೇಲೆ ತನ್ನ ಸಾವಿಗೆ ಕಾರಣರಾದವರ ಹೆಸರುಗಳನ್ನ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಪೋಷಕರು ಆರೋಪಿಸಿದ್ದಾರೆ.

7 ವರ್ಷಗಳ ಹಿಂದೆ ಅಕ್ಮಲ್ ಅನ್ಸರ್‌ಗೆ ವಿವಾಹವಾಗಿತ್ತು. ಆರಂಭದಲ್ಲಿ ಇಬ್ಬರೂ ಚೆನ್ನಾಗಿಯೇ ಇದ್ದರು. ಮಕ್ಕಳಾದ ಬಳಿಕ, ಮೃತ ಅಕ್ಮಲ್ ಅನ್ಸರ್ ಮೇಲೆ ಅನುಮಾನ ಪಟ್ಟು ಪತ್ನಿ ಕಿರುಕುಳ ಕೊಡುತ್ತಿದ್ದಳು. ಅಷ್ಟೇ ಅಲ್ಲದೇ ಆಗಾಗ ಪತಿ ಬಳಿ ಹಣಕ್ಕೆ ಬೇಡಿಕೆ ಸಹ ಇಡುತ್ತಿದ್ದಳು. ಒಂದು ತಿಂಗಳ ಹಿಂದೆ ಗಲಾಟೆ ಮಾಡಿಕೊಂಡು ಗೋವಿಂದಪುರದ ಗಂಡನ ಮನೆಯಿಂದ ಬಿಟಿಎಂ ಲೇಔಟ್ ತಾಯಿ ಮನೆಗೆ ಬಂದಿದ್ದಳು ಎಂದು ತಿಳಿದು ಬಂದಿದೆ.

ಮಾ.11 ರಂದು ಅಕ್ಮಲ್ ಅನ್ಸರ್‍ನನ್ನು ಮನೆಗೆ ಕರೆಸಿಕೊಂಡು ಪತ್ನಿ ಹಾಗೂ ಪತ್ನಿ ಕುಟುಂಬಸ್ಥರು ಹಲ್ಲೆ ಮಾಡಿದ್ದರು. ಇದರಿಂದ ಮನನೊಂದು ಅಕ್ಮಲ್ ಅನ್ಸರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಸಹೋದರ ಆರೋಪಿಸಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ