ಕೊಳವೆ ಬಾವಿ
ಕೊಳವೆ ಬಾವಿ 
ರಾಜ್ಯ

ಬೆಂಗಳೂರು: ಅನುಮತಿ ಇಲ್ಲದೆ 20 ಕೊಳವೆ ಬಾವಿ ಕೊರೆದವರ ವಿರುದ್ಧ ಕ್ರಮಕ್ಕೆ BWSSB ಆದೇಶ!

Manjula VN

ಬೆಂಗಳೂರು: ನಗರದಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಈ ನಡುವಲ್ಲೇ ಅನುಮತಿ ಇಲ್ಲದೆ 20 ಕೊಳವೆ ಬಾವಿಗಳನ್ನು ಕೊರೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಎಂಜಿನಿಯರ್‌ಗಳಿಗೆ ಸೂಚನೆ ನೀಡಿದೆ.

ಬೋರ್‌ವೆಲ್ ಕೊರೆಯುವವರು ಮಂಡಳಿಯಿಂದ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ. ಅನುಮತಿ ಪಡೆಯದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಇತ್ತೀಚೆಗೆ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ಆದರೆ, ಕಟ್ಟುನಿಟ್ಟಿನ ಸೂಚನೆಗಳ ಹೊರತಾಗಿಯೂ, ಕೆಲವರು ಆದೇಶವನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ.

ಪ್ರಕರಣವೊಂದರಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡ ಮನೋಜ್ ಕುಮಾರ್ ಅವರು ತಲಕಾವೇರಿ ಲೇಔಟ್‌ನ ವಿಭೂತಿಪುರದ ಕೆರೆ ಬಳಿ ಬೋರ್‌ವೆಲ್ ಕೊರೆಸುತ್ತಿದ್ದಾರೆಂದು ಆರೋಪಿಸಲಾಗಿತ್ತು. ಈ ವಿಚಾರ ವೈರಲ್ ಆಗುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಬಿಡಬ್ಲ್ಯೂಎಸ್‌ಎಸ್‌ಬಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸೈಯದ್ ಮುದಸ್ಸಿರ್ ಅವರು, ಕಾಮಗಾರಿಯನ್ನು ಸ್ಥಗಿತಗೊಳಿಸಿದರು.

ಈ ಬಗ್ಗೆ ಎಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ದೂರ ಬಳಿಕ ಬೋರ್‌ವೆಲ್ ವಾಹನ ಸಿಬ್ಬಂದಿ ಮತ್ತು ಮಾಲೀಕರು ಠಾಣೆಗೆ ಆಗಮಿಸಿ, ಮಾಹಿತಿ ನೀಡಿದ್ದರು ಎಂದು ಮುದಾಸಿರ್ ಹೇಳಿದ್ದಾರೆ,

ಮನೋಜ್ ಕುಮಾರ್ ಅವರು ಮಾತನಾಡಿ, ನಾನು ಬೋರ್‌ವೆಲ್ ಕೊರೆಸುತ್ತಿರಲಿಲ್ಲ. ಹಳೆಯ ಬೋರ್‌ವೆಲ್ ಬತ್ತಿಹೋಗಿದ್ದ ಹಿನ್ನೆಲೆಯಲ್ಲಿ ಮರಳಿ ಭೂಮಿಯನ್ನು ಕೊರೆಸಲಾಗುತ್ತಿತ್ತು. ನಾನು ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ.

SCROLL FOR NEXT