ಸಿಎಂ ಸಿದ್ದರಾಮಯ್ಯ 
ರಾಜ್ಯ

ಗ್ಯಾರಂಟಿ ಯೋಜನೆ ವೈಯಕ್ತಿಕ ಘೋಷಣೆಯಲ್ಲ, ಪಕ್ಷಕ್ಕೆ ಸೇರಿದ್ದು: ಹೈಕೋರ್ಟ್'ಗೆ ಸಿಎಂ ಸಿದ್ದರಾಮಯ್ಯ

ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಲಾದ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ವೈಯಕ್ತಿಕವಾಗಿ ಘೋಷಿಸಿ ಚುನಾವಣೆಯಲ್ಲಿ ಅಕ್ರಮ ಎಸಗಿ ಜಯಗಳಿಸಿದ್ದಾರೆ ಎಂಬ ಆರೋಪ ಸಮರ್ಥನೀಯವಲ್ಲ ಎಂದು ಹೈಕೋರ್ಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಬೆಂಗಳೂರು: ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಲಾದ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ವೈಯಕ್ತಿಕವಾಗಿ ಘೋಷಿಸಿ ಚುನಾವಣೆಯಲ್ಲಿ ಅಕ್ರಮ ಎಸಗಿ ಜಯಗಳಿಸಿದ್ದಾರೆ ಎಂಬ ಆರೋಪ ಸಮರ್ಥನೀಯವಲ್ಲ ಎಂದು ಹೈಕೋರ್ಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ನಿವಾಸಿ ಕೆ ಎಂ ಶಂಕರ್ ಸಲ್ಲಿಸಿರುವ ಚುನಾವಣಾ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸಿದ್ದರಾಮಯ್ಯ ಪರ ಹಿರಿಯ ವಕೀಲ ಪ್ರೊ. ಕೆ ರವಿವರ್ಮ ಕುಮಾರ್ ವಾದ ಮಂಡಿಸಿದರು. ಅರ್ಜಿದಾರರ ಆರೋಪವನ್ನು ಗಮನಿಸಿದರೆ ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕುವ ರೀತಿಯಂತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡಲಾಗಿದೆ. ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರದ ಹಣವನ್ನು ಬಳಸಲಾಗುತ್ತಿದೆಯೇ ಹೊರತು ಸಿದ್ದರಾಮಯ್ಯವರ ವೈಯಕ್ತಿಕ ಆದಾಯವನ್ನಲ್ಲ ಎಂದು ಪೀಠಕ್ಕೆ ಸ್ಪಷ್ಟಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ಪರ ವಕೀಲರು ಕೆಲವು ದಾಖಲೆಗಳನ್ನು ಸಲ್ಲಿಸಿದ್ದು, ಇದಕ್ಕೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಲ್ಲಿಸಿ” ಎಂದು ಪ್ರತಿವಾದಿಗಳ ಪರ ವಕೀಲರಿಗೆ 15 ದಿನಗಳ ಕಾಲಾವಕಾಶ ನೀಡಿದ ಪೀಠ ವಿಚಾರಣೆ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್