ಹೇಮಂತ್ ನಿಂಬಾಳ್ಕರ್
ಹೇಮಂತ್ ನಿಂಬಾಳ್ಕರ್ 
ರಾಜ್ಯ

ಪತ್ನಿ ಅಂಜಲಿ ನಿಂಬಾಳ್ಕರ್‌ಗೆ ಕಾಂಗ್ರೆಸ್‌ ಟಿಕೆಟ್‌; ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೆ ಬಿಜೆಪಿ ಒತ್ತಾಯ

Ramyashree GN

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕನ್ನಡದಿಂದ ಕಾಂಗ್ರೆಸ್‌ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿರುವ ಅಂಜಲಿ ನಿಂಬಾಳ್ಕರ್ ಅವರ ಪತಿ ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಮತ್ತು ಅವರನ್ನು ಚುನಾವಣೆ ಸಂಬಂಧಿತ ಎಲ್ಲ ಕೆಲಸಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ಬುಧವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಹೇಮಂತ್ ನಿಂಬಾಳ್ಕರ್ ಅವರು ಸದ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಬಿಜೆಪಿ ತಿಳಿಸಿದೆ.

ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಅಂಜಲಿ ನಿಂಬಾಳ್ಕರ್ ಸದ್ಯ ಬೆಳಗಾವಿ ಜಿಲ್ಲೆಯ ಖಾನಾಪುರದಿಂದ ಶಾಸಕಿಯಾಗಿದ್ದಾರೆ.

'ಹೇಮಂತ್ ಅವರು ಕರ್ನಾಟಕದಲ್ಲಿ ಅತ್ಯಂತ ಪ್ರಭಾವಿ ಐಪಿಎಸ್ ಅಧಿಕಾರಿಯಾಗಿದ್ದಾರೆ. ಚುನಾವಣೆ ದೃಷ್ಟಿಯಿಂದ, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಒಲವು ತೋರಲು ಇತರ ಐಪಿಎಸ್ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಮತ್ತು ಚುನಾವಣಾ ಕಾರ್ಯದಲ್ಲಿರುವ ಸಿಬ್ಬಂದಿ ಮೇಲೆ ಪ್ರಭಾವ ಬೀರುವ ಎಲ್ಲ ಸಾಧ್ಯತೆಗಳಿವೆ. ಅವರು ಅದೇ ಹುದ್ದೆಯಲ್ಲಿ ಮುಂದುವರಿದರೆ, ಕಾಂಗ್ರೆಸ್ ಮತ್ತು ಅದರ ಅಭ್ಯರ್ಥಿಗಳ ಪರವಾಗಿ ತಮ್ಮ ಪ್ರಭಾವವನ್ನು ಬಳಸುತ್ತಾರೆ' ಎಂದು ಬಿಜೆಪಿ ಹೇಳಿದೆ.

ರೌಡಿಶೀಟ್‌ನಲ್ಲಿ ಹೆಸರುಗಳನ್ನು ನಮೂದಿಸುವುದು ಸೇರಿದಂತೆ ಪೊಲೀಸ್ ಇಲಾಖೆಯು ಪ್ರಮುಖ ಅಧಿಕಾರವನ್ನು ಹೊಂದಿದೆ. ನಮ್ಮ ಪಕ್ಷದ 'ಕಾರ್ಯಕರ್ತರಿಗೆ' ಕಿರುಕುಳ ನೀಡಲು ಇದನ್ನು ದುರುಪಯೋಗಪಡಿಸಿಕೊಳ್ಳಬಹುದು, ನಮ್ಮ 'ಕಾರ್ಯಕರ್ತರ' ವಿರುದ್ಧ ಬಹಿಷ್ಕಾರದ ಆದೇಶಗಳನ್ನು ರವಾನಿಸಬಹುದು ಎಂದು ಹೇಳಿದೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾನೂನುಬಾಹಿರ ಕೃತ್ಯಗಳಿಗೆ ಬೆಂಬಲ ನೀಡಲು ಅವರು ಪೊಲೀಸ್ ಸಿಬ್ಬಂದಿ ಮೇಲೆ ಪ್ರಭಾವ ಬೀರುವ ಎಲ್ಲಾ ಸಾಧ್ಯತೆಗಳೂ ಇವೆ ಎಂದು ಬಿಜೆಪಿ ಆರೋಪಿಸಿದೆ.

SCROLL FOR NEXT