ಗುರುಲಿಂಗ ಕಾಪಸೆ 
ರಾಜ್ಯ

ಹೆಸರಾಂತ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಧಾರವಾಡ: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಗರದ ಸಪ್ತಾಪೂರದ ದುರ್ಗಾ ಕಾಲೊನಿಯ ಅವರ ಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಗುರುಲಿಂಗ ಕಾಪಸೆ ಅವರ ಮೂಲ ಊರು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮ. ಸದ್ಯ ಧಾರವಾಡದ ಸಪ್ತಾಪುರ ದುರ್ಗಾ ಕಾಲೋನಿಯಲ್ಲಿ ನೆಲೆಸಿದ್ದರು. ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು.

1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ತಮ್ಮ 96ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ಮಧ್ಯಾಹ್ನ 2ರವರೆಗೆ ದುರ್ಗಾ ಕಾಲೋನಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುಲಿಂಗ ಕಾಪಸೆ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ.

ಮಕ್ಕಳ ಸಾಹಿತ್ಯದಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದರು. ಮಧುರ ಚೆನ್ನರ ಜೀವನ ಹಾಗೂ ಕೃತಿಗಳ ಕುರಿತ ಮಹಾಪ್ರಬಂಧ ರಚಿಸಿದ್ದರು. ಮಧುರ ಚೆನ್ನ, ಅಕ್ಕಮಹಾದೇವಿ, ಅರವಿಂದರು, ಬಸವೇಶ್ವರ, ಹಲಸಂಗಿ ಗೆಳೆಯರು ಸೇರಿ ಹಲವು ಕೃತಿಗಳನ್ನು ರಚಿಸಿದ್ದಾರೆ. ಮರಾಠಿಯಿಂದ ಅನೇಕ ಕೃತಿಗಳನ್ನು ಕನ್ನಡ ಅನುವಾದ ಮಾಡಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ. ಮಕ್ಕಳ ಸಾಹಿತ್ಯದಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಕಾಪಸೆಯವರು ದ.ರಾ.ಬೇಂದ್ರೆ, ಮಧುರ ಚೆನ್ನ ಸೇರಿ ಹಲವು ಸಾಹಿತಿಗಳ ಒಡನಾಡಿಯಾಗಿದ್ದರು.

ಕಾಪಸೆಯವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. 1945ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿಯೇ ತಮ್ಮೂರಿನಲ್ಲಿ ಶಿಕ್ಷಕರಾಗಿ ಸೇವೆ ಆರಂಭ ಮಾಡಿದ ಕಾಪಸೆ ಕಾಲಾಂತರದಲ್ಲಿ ಧಾರವಾಡಕ್ಕೆ ಬಂದು ನೆಲೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ವೋಟ್ ಚೋರಿಯಿಂದ ಕಾನೂನು ಚೋರಿ' : ಇಡೀ ವ್ಯವಸ್ಥೆ ನಾಶಕ್ಕೆ ಬಿಜೆಪಿ ಸಂಚು,EC, ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ!

ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗಿ ಗವಿಸಿದ್ದೇಶ್ವರ ಸ್ವಾಮೀಜಿ ಆಯ್ಕೆ; ಗೊಂದಲಕ್ಕೆ ತೆರೆ

ಬಿಹಾರದಲ್ಲಿ ಜಮುಯಿ ಘಟನೆ ಬೆನ್ನಲ್ಲೇ ಮತ್ತೊಂದು ಹೀನ ಕೃತ್ಯ: ಬಾಲಕಿಯನ್ನು ಹಿಡಿದು ಎಳೆದಾಡಿದ ಕೀಚಕರು, Video

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡುವಂತೆ ಚುನಾವಣಾ ಆಯೋಗಕ್ಕೆ BJP ಶಾಸಕ ಪತ್ರ: ಬಿಕೆ ಹರಿಪ್ರಸಾದರಿಂದ ದಾಖಲೆ ಬಿಡುಗಡೆ!

ದೇಶಾದ್ಯಂತ ಮತದಾರರ ಪಟ್ಟಿಯಿಂದ 13 ಕೋಟಿ ಮತದಾರರ ಹೆಸರು ಡಿಲೀಟ್! ಅವರ ಮಕ್ಕಳ ಗತಿಯೇನು? CEC ವಿರುದ್ಧ ದೂರು ದಾಖಲಿಸಿದ TMC ಸಂಸದೆ