ಸಂಗ್ರಹ ಚಿತ್ರ 
ರಾಜ್ಯ

ಐಪಿಎಲ್ ಬೆಟ್ಟಿಂಗ್ ಹುಚ್ಚು: 1 ಕೋಟಿ ರೂ. ಸಾಲ ಮಾಡಿದ ಪತಿ; ಪತ್ನಿ ಆತ್ಮಹತ್ಯೆ

ಪತಿಯ ಆನ್‌ಲೈನ್‌ ಕ್ರಿಕೆಟ್‌ ಬೆಟ್ಟಿಂಗ್‌ ಗೀಳಿಗೆ ಪತ್ನಿಯೊಬ್ಬಳು ಬಲಿಯಾಗಿರುವ ಘಟನೆಯೊಂದು ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ: ಪತಿಯ ಆನ್‌ಲೈನ್‌ ಕ್ರಿಕೆಟ್‌ ಬೆಟ್ಟಿಂಗ್‌ ಗೀಳಿಗೆ ಪತ್ನಿಯೊಬ್ಬಳು ಪಲಿಯಾಗಿರುವ ಘಟನೆಯೊಂದು ಚಿತ್ರದುರ್ಗದಲ್ಲಿ ನಡೆದಿದೆ.

ಹೊಸದುರ್ಗದ ಸಣ್ಣ ನೀರಾವರಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್‌ ಆಗಿರುವ ದರ್ಶನ್‌ ಬಾಬು ಪತ್ನಿ ರಂಜಿತಾ (24) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಐಪಿಎಲ್‌ಗಾಗಿ ಬೆಟ್ಟಿಂಗ್‌ ಗೀಳಿಗೆ ಬಿದ್ದಿದ್ದ ದರ್ಶನ್‌ ಬಾಬು, 1.5 ಕೋಟಿ ರೂ.ಗೂ ಅಧಿಕ ಸಾಲ ಮಾಡಿದ್ದ. ಸಾಲ ಕೊಟ್ಟವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದಾಗಿ ರಂಜಿತಾ ಡೆತ್‌ನೋಟ್‌ನಲ್ಲಿ ಹೇಳಿಕೊಂಡಿದ್ದಾರೆ.

ಹೊಳಲ್ಕೆರೆಯ ಮನೆಯ ಬೆಡ್‌ರೂಂ ನಲ್ಲಿ ಮಾ.18 ರಂದು ರಂಜಿತಾ ಅವರ ಮೃತದೇಹ ಪತ್ತೆಯಾಗಿದೆ. ತನ್ನ ಈ ನಿರ್ಧಾರಕ್ಕೆ ಸಾಲ ನೀಡಿದ ವ್ಯಕ್ತಿಯೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆಂದ ತಿಳಿದುಬಂದಿದೆ.

ದರ್ಶನ್ ಜೊತೆ ಮದುವೆಯಾದ ಒಂದು ವರ್ಷದ ಬಳಿರ ರಂಜಿತಾ ಅವರಿಗೆ ತನ್ನ ಪತಿ ಬೆಟ್ಟಿಂಗ್‌ ಗೀಳಿಗೆ ಬಿದ್ದಿರುವುದು ತಿಳಿದುಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!

2nd T20I: Debut ಪಂದ್ಯದಲ್ಲೇ Vaibhav Sooryavanshi ಝಲಕ್, ಇಂಗ್ಲೆಂಡ್ ಗೆ ಗೆಲ್ಲಲು 191 ರನ್ ಸವಾಲಿನ ಗುರಿ ನೀಡಿದ ಭಾರತ!

ವೈಭವ್ ಸೂರ್ಯವಂಶಿ ಎಡವಟ್ಟು: ಪಾದಾರ್ಪಣೆ ಪಂದ್ಯದಲ್ಲಿ 2 ಅದ್ಭುತ ಸಿಕ್ಸರ್ ಬಾರಿಸಿ, ಸ್ಟಂಪ್ ಔಟ್‌ಗೆ ಬಲಿ; video

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು