ಪ್ರಾತಿನಿಧಿಕ ಚಿತ್ರ 
ರಾಜ್ಯ

ಮಡಿಕೇರಿ: ಬಿಜೆಪಿ ಚುನಾವಣಾ ರ‍್ಯಾಲಿಯಲ್ಲಿ ಜೇಬುಗಳ್ಳರ ಕೈಚಳಕ; ಬಿಜೆಪಿ ನಾಯಕರ ಪರ್ಸ್ ಮಾಯ!

ಬುಧವಾರ ಮಡಿಕೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾಲ್ಗೊಂಡಿದ್ದ ಬಿಜೆಪಿ ಚುನಾವಣಾ ರ‍್ಯಾಲಿಯಲ್ಲಿ ಜೇಬುಗಳ್ಳರು ತಮ್ಮ ಕೈಚಳಕ ತೋರಿಸಿದ್ದು, ಮಾಜಿ ಶಾಸಕರಾದ ಕೆಜಿ ಬೋಪಯ್ಯ, ಅಪ್ಪಚ್ಚು ರಂಜನ್ ಸೇರಿದಂತೆ ಕನಿಷ್ಠ ಏಳು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಪರ್ಸ್ ಕಳವಾಗಿದೆ.

ಮಡಿಕೇರಿ: ಬುಧವಾರ ಮಡಿಕೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾಲ್ಗೊಂಡಿದ್ದ ಬಿಜೆಪಿ ಚುನಾವಣಾ ರ‍್ಯಾಲಿಯಲ್ಲಿ ಜೇಬುಗಳ್ಳರು ತಮ್ಮ ಕೈಚಳಕ ತೋರಿಸಿದ್ದು, ಮಾಜಿ ಶಾಸಕರಾದ ಕೆಜಿ ಬೋಪಯ್ಯ, ಅಪ್ಪಚ್ಚು ರಂಜನ್ ಸೇರಿದಂತೆ ಕನಿಷ್ಠ ಏಳು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಪರ್ಸ್ ಕಳವಾಗಿದೆ.

20,000 ನಗದು, ಹಲವು ಕಾರ್ಡ್‌ಗಳು ಮತ್ತು ಗುರುತಿನ ಚೀಟಿಗಳನ್ನು ಕಳೆದುಕೊಂಡಿರುವುದಾಗಿ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಗುತ್ತಿಗೆದಾರನಾಗಿರುವ ಮತ್ತೋರ್ವ ಬಿಜೆಪಿ ಕಾರ್ಯಕರ್ತ ಸುಮಾರು 50,000 ರೂಪಾಯಿಗಳನ್ನು ಕಳೆದುಕೊಂಡಿರುವುದಾಗಿ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸೇರಿ ಒಟ್ಟು ಸುಮಾರು 5 ಲಕ್ಷ ರೂಪಾಯಿ ನಗದನ್ನು ಕಳೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ಘಟನೆಗಳ ಹಿಂದೆ ‘ಹೊರಗಿನವರ’ ಕೈವಾಡವಿದೆ ಎಂದು ಅಪ್ಪಚ್ಚು ರಂಜನ್ ಶಂಕಿಸಿದ್ದಾರೆ. ವೇದಿಕೆ ಕಾರ್ಯಕ್ರಮದ ನಂತರ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಜನರು ವೇದಿಕೆ ಬಳಿ ಧಾವಿಸಿದಾಗ ಕಳ್ಳರು ತಮ್ಮ ಕೈಚಳಕ ತೋರಿಸಿರುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!