ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 
ರಾಜ್ಯ

ಸರ್ಕಾರ, ಕಾಂಗ್ರೆಸ್ ಪಕ್ಷದ ಚಿಹ್ನೆ ದುರ್ಬಳಕೆ: ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಸಿಕೊಂಡು ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಅವರ ಪರವಾಗಿ ಪ್ರಚಾರ ಮಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಬೆಂಗಳೂರು: ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಸಿಕೊಂಡು ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಅವರ ಪರವಾಗಿ ಪ್ರಚಾರ ಮಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ನಗರದ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಬುಧವಾರ ಭೇಟಿ ನೀಡಿದ ಬಿಜೆಪಿ ನಿಯೋಗವು, ಡಿ.ಕೆ.ಶಿವಕುಮಾರ್ ಅವರ ವಿರುದ್ಧ ದೂರು ನೀಡಿತು.

ಡಿ.ಕೆ.ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್‍ಬುಕ್ ಪೇಜಿನಲ್ಲಿ ಕರ್ನಾಟಕ ಸರಕಾರದ ಚಿಹ್ನೆ, ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಸಿಕೊಂಡು ಡಿ.ಕೆ.ಸುರೇಶ್ ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಿ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ್ದಾಗಿ ಗಮನಕ್ಕೆ ತರಲಾಯಿತು.

ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ರಾಜ್ಯ ವಕ್ತಾರರಾದ ಎಚ್.ಎನ್. ಚಂದ್ರಶೇಖರ್, ಹೆಚ್. ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಅವರು ಈ ದೂರನ್ನು ಸಲ್ಲಿಸಿದರು.

ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೂ ಒತ್ತಾಯ

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಮೀಷನರ್ ಹೇಮಂತ್ ನಿಂಬಾಳ್ಕರ್ ಅವರನ್ನು ಆ ಹುದ್ದೆಯಿಂದ ವರ್ಗಾವಣೆ ಮಾಡಲು ಕೋರಲಾಗಿದೆ. ಅವರು ತಮ್ಮ ಕಚೇರಿಯನ್ನು ಬಳಸಿಕೊಂಡು ಪತ್ನಿ, ಉತ್ತರ ಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಪರವಾಗಿ ಮತ ನೀಡಲು ಕೇಳುತ್ತಿರುವುದಾಗಿ ಮಾಹಿತಿ ಸಿಕ್ಕಿದೆ. ಆದ್ದರಿಂದ ತಕ್ಷಣ ಅವರನ್ನು ಅಲ್ಲಿಂದ ವರ್ಗಾವಣೆ ಮಾಡುವಂತೆ ಚುನಾವಣಾ ಕಮೀಷನರ್ ಅವರಿಗೆ ಮನವಿ ಮಾಡಿದ್ದೇವೆ. ರಾಜ್ಯದ ಒಳಗಡೆ ಇದ್ದರೆ ಮತ್ತೆ ಪ್ರಭಾವ ಬಳಸುವ ಸಾಧ್ಯತೆ ಇದ್ದು, ಅವರಿಗೆ ಕರ್ನಾಟಕದಿಂದ ಹೊರಗಡೆ ಕೆಲಸ ಮಾಡಲು ಅವಕಾಶ ಕೊಡಿ ಎಂದು ಮನವಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಚುನಾವಣಾ ವೇಳಾಪಟ್ಟಿ ನಾಳೆಯಿಂದ (ಮಾ.28) ಆರಂಭವಾಗಲಿದ್ದು, ಈ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಕಮೀಷನರ್ ತಿಳಿಸಿದ್ದಾರೆ ಎಂದರು.

ರಾಜ್ಯ ಸರಕಾರದ ಕೆಲವು ಸಚಿವರು ತಮ್ಮ ಅಧಿಕೃತ ಕಚೇರಿಗಳನ್ನು ಲೋಕಸಭಾ ಚುನಾವಣಾ ಕೆಲಸಕ್ಕಾಗಿ ದುರ್ಬಳಕೆ ಮಾಡಿಕೊಳ್ಳುವ ಸಂಬಂಧ ಇನ್ನೊಂದು ದೂರಿನಲ್ಲಿ ಗಮನ ಸೆಳೆಯಲಾಗಿದೆ. ಬಿಜೆಪಿ ಚುನಾವಣಾ ಬೋನಸ್ ಕುರಿತಂತೆ ವಾಟ್ಸ್ ಆಪ್ ನಕಲಿ ಸಂದೇಶದ ಕುರಿತು ಮತ್ತೊಂದು ದೂರು ಕೊಡಲಾಗಿದ್ದು, ಕ್ರಮ ಕೈಗೊಳ್ಳಲು ಕೋರಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT