ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ 
ರಾಜ್ಯ

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅನಾಹುತ!

Srinivasamurthy VN

ದಕ್ಷಿಣ ಕನ್ನಡ: ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಕಾರ್ಖಾನೆಯೊಂದು ಅಗ್ನಿಗಾಹುತಿಯಾಗಿದೆ.

ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ‌ ಈ ಅಗ್ನಿ ದುರಂತ ಸಂಭವಿಸಿದ್ದು, ತಡ ರಾತ್ರಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಾರ್ಖಾನೆ ಇಡೀಯ ವ್ಯಾಪಿಸಿದ್ದು ಮಾಹಿತಿ ಪಡೆದ ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಬೆಂಕಿ ನಂದಿಸಲು ಅಗ್ನಿಶಾಮಕ ದಳ ಹರಸಾಹಸ

ಅಗ್ನಿ ಅನಾಹುತ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಎಂಆರ್ ಪಿಎಲ್, ಎನ್ ಎಂಪಿಟಿನಿಂದ ಸುಮಾರು 8 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟವು. ನಿರಂತರ ಮೂರೂವರೆ ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಆದರೆ ಅಷ್ಟರಲ್ಲಿ ಫ್ಯಾಕ್ಟರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.

ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಶಾರ್ಟ್ ಸರ್ಕಿಟ್ ದುರಂತಕ್ಕೆ ಕಾರಣವೆಂದು ಶಂಕಿಸಲಾಗಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಸಂಭವಸಿದೆ ಎಂದು ಮಾಲಿಕ ಮೊಹಮ್ಮದ್ ತಿಳಿಸಿದ್ದಾರೆ. ಕಾರ್ಖಾನೆಯು 'ಶಿಹಾರ್ ಎಂಟರ್‌ಪ್ರೈಸಸ್' ಕಂಪನಿಯ ಒಡೆತನದಲ್ಲಿದೆ ಎನ್ನಲಾಗಿದೆ.

ಬೆಂಕಿ ಹೊತ್ತಿಕೊಳ್ಳಲು ಕಾರಣದ ಕುರಿತು ಇನ್ನೂ ತನಿಖೆ ಮಾಡಲಾಗುತ್ತಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT