ಕಾಂಗ್ರೆಸ್ ನಾಯಕರಿಂದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಭೇಟಿ
ಕಾಂಗ್ರೆಸ್ ನಾಯಕರಿಂದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಭೇಟಿ 
ರಾಜ್ಯ

ಕಾಂಗ್ರೆಸ್ ನಾಯಕರಿಂದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಭೇಟಿ: ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ!

Shilpa D

ಮೈಸೂರು: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದಂತೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ನೇತೃತ್ವದ ಕಾಂಗ್ರೆಸ್ ನಾಯಕರ ತಂಡವು ಜಯಲಕ್ಷ್ಮೀಪುರಂನಲ್ಲಿರುವ ವಿ. ಶ್ರೀನಿವಾಸಪ್ರಸಾದ್ ನಿವಾಸಕ್ಕೆ ಭೇಟಿ ನೀಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ ಮತ್ತು ಚಾಮರಾಜನಗರದಲ್ಲಿ ಪುತ್ರ ಸುನೀಲ್‌ ಬೋಸ್ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಅವರಿಗೆ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸಾಥ್ ನೀಡಿದರು. ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ರಣತಂತ್ರ ರೂಪಿಸಿರುವ ಭಾಗವಾಗಿ ಈ ಭೇಟಿ ನಡೆದಿದೆ ಎನ್ನಲಾಗಿದೆ.

ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶ್ರೀನಿವಾಸಪ್ರಸಾದ್ ಅವರು ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಶುಭ ಕೋರಲು ಬಂದಿದ್ದೇವೆ. ಇಲ್ಲಿ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದರು.

ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ತೊಂದರೆಯಾದಾಗಲೆಲ್ಲ ಅವರು ಹೋರಾಟ ಮಾಡಿದ್ದಾರೆ. ಕೆಲವು ರಾಜಕೀಯ ಕಾರಣದಿಂದ ನಾವು ಶ್ರೀನಿವಾಸಪ್ರಸಾದ್ ದೂರ ಆಗಿದ್ದೆವು. ಆ ಸಂದರ್ಭದಲ್ಲಿ ನಾವು ಅವರನ್ನು ಸೋಲಿಸಿದ್ದೆವು, ಅವರು ನಮ್ಮನ್ನು ಸೋಲಿಸಿದರು. ಹಾಗಂತ ನಾವು ರಾಜಕೀಯ ಶತ್ರುಗಳಲ್ಲ. ರಾಜಕೀಯವಾಗಿ ಅಷ್ಟೇ ನಮ್ಮ ವಿರೋಧಗಳು ಇದ್ದವು. ನಾವು ಪರಸ್ಪರ ಗೌರವದಿಂದಲೇ ಇದ್ದೇವೆ'' ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವದ್ವಯರು ಭೇಟಿ ಕೊಟ್ಟರು. ಗೆಲುವಿಗಾಗಿ, ಮುನಿಸು ಮರೆತು ಮನೆಗೆ ಬಂದಿದ್ದರು. ಅವರೊಂದಿಗೆ ಕೆಲಕಾಲ ಗೌಪ್ಯ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಕೂಡ ಆಗಮಿಸಿದ್ದರು.

SCROLL FOR NEXT