ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ 
ರಾಜ್ಯ

ಬೀದರ್: ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ; ನೀರು ಕುಡಿದ ಜನರು ದಿಗ್ಭ್ರಮೆ!

ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ.

ಬೀದರ್: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ.

ಬೀದರ್‌ನ ಆಣದೂರ ಗ್ರಾಮದಲ್ಲಿ ಈ ಘಟನೆ (Bidar News) ನಡೆದಿದ್ದು, ಕುಡಿಯುವ ನೀರಿನ ಓವರ್ ಹೆಡ್ ವಾಟರ್ ಟ್ಯಾಂಕ್‌ನಲ್ಲಿ (Water Tank) ಶವವೊಂದು (Dead Body Found) ಪತ್ತೆಯಾಗಿದೆ. ಇದೇ ಟ್ಯಾಂಕ್ ನ ನೀರನ್ನು ಗ್ರಾಮಸ್ಥರು ಕುಡಿದಿದ್ದು, ಇದೀಗ ಘಟನೆ ಬೆಳಕಿಗೆ ಬಂದ ಬಳಿಕ ಗ್ರಾಮಸ್ಥರು ದಿಗ್ಭ್ರಮೆಗೊಂಡಿದ್ದಾರೆ.

ನೀರಿನ ವಾಸನೆಯಿಂದ ಘಟನೆ ಬೆಳಕಿಗೆ

ಗ್ರಾಮದ ಮನೆ ಮನೆಗೆ ಸರಬರಾಜು ಮಾಡುತ್ತಿದ್ದ ನೀರು ಗಬ್ಬು ನಾರುತ್ತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಮೊದಮೊದಲು ಕುಡಿಯುವ ನೀರಿಗೆ ಚರಂಡಿ ನೀರು ಏನಾದರೂ ಮಿಶ್ರಣ ಎಂದು ಶಂಕಿಸಲಾಗಿತ್ತು. ಮನೆಗೆ ಸರಬರಾಜು ಆಗುತ್ತಿದ್ದ ನೀರಲ್ಲಿ ಕೂದಲು ಬರುತ್ತಿದ್ದವು. ಇತ್ತ ದೂರು ಬಂದ ಕಾರಣಕ್ಕೆ ವಾಟರ್ ಟ್ಯಾಂಕ್ ಪರಿಶೀಲನೆ ಮಾಡಲು ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಟ್ಯಾಂಕ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.

ನೀರಿನ ಟ್ಯಾಂಕ್‌ನಲ್ಲಿ ಎಷ್ಟು ದಿವಸದಿಂದ ಶವವಿದೆ? ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಎಂಬುದು ತಿಳಿದು ಬಂದಿಲ್ಲ. ಗ್ರಾಮಸ್ಥರು ಹಲವು ದಿನದಿಂದ ಶವ ಬಿದ್ದಿದ್ದ ಟ್ಯಾಂಕಿನ ನೀರನ್ನೇ ಕುಡಿದಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT