ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ರಾಜ್ಯ

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ 20.85 ಕೋಟಿ ರೂಪಾಯಿ ಹಣ, 27 ಕೋಟಿ ರೂ. ಮೌಲ್ಯದ ಮದ್ಯ ವಶ!

Nagaraja AB

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ಕರ್ನಾಟಕದಲ್ಲಿ 20.85 ಕೋಟಿ ರೂಪಾಯಿ ಹಣ ಮತ್ತು 27 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.

ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ 28 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಲಿದೆ. ಇಲ್ಲಿಯವರೆಗೆ ವಶಕ್ಕೆ ಪಡೆಯಲಾದ ಒಟ್ಟು ಮೌಲ್ಯ 62.42 ಕೋಟಿ ರೂ.ಆಗಿದೆ.

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಫ್ಲೈಯಿಂಗ್ ಸ್ಕ್ವಾಡ್, ನಿಗಾವಣೆ ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 20.85 ಕೋಟಿ ನಗದು, 70.86 ಲಕ್ಷ ಮೌಲ್ಯದ ಉಚಿತ ಉಡುಗೊರೆಗಳು, 27 ಕೋಟಿಗೂ ಅಧಿಕ ಮೌಲ್ಯದ ರೂ. 8.63 ಲಕ್ಷ ಲೀಟರ್ ಮದ್ಯ ಮತ್ತು 1.47 ಕೋಟಿ ರೂ.ಗೂ ಅಧಿಕ ಮೌಲ್ಯದ 211.23 ಕೆಜಿ ಮಾದಕ ವಸ್ತುಗಳು, 9 ಕೋಟಿ ರೂ.ಗೂ ಅಧಿಕ ಮೌಲ್ಯದ 15 ಕೆಜಿಗಿಂತ ಹೆಚ್ಚಿನ ಚಿನ್ನ, 27 ಲಕ್ಷ ರೂ.ಗೂ ಅಧಿಕ ಮೌಲ್ಯದ 59.04 ಕೆಜಿ ಬೆಳ್ಳಿ ಹಾಗೂ 9 ಲಕ್ಷ ರೂ. ಮೌಲ್ಯದ 21.17 ಕ್ಯಾರೆಟ್ ವಜ್ರ ಮತ್ತಿತರ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.

ಹಣ, ಮದ್ಯ, ಡ್ರಗ್ಸ್, ಚಿನ್ನಾಭರಣ ಉಚಿತ ವಸ್ತುಗಳ ವಶಕ್ಕೆ ಸಂಬಂಧಿಸಿದಂತೆ 969 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

SCROLL FOR NEXT