ಬಾಂಬರ್ ಮುಸ್ಸಾವೀರ್ ಹುಸೈನ್ ಶಾಜೀಬ್ ಹಾಗೂ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹ 
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್, ಉಗ್ರ ಮತೀನ್ ಫೋಟೋ ಬಿಡುಗಡೆ: ಸುಳಿವು ನೀಡಿದ್ರೆ 10 ಲಕ್ಷ ರೂ. ಬಹುಮಾನ!

ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್ ಹುಸೈನ್ ಶಾಜೀಬ್ ಹಾಗೂ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹನ ಫೋಟೋ ಬಿಡುಗಡೆ ಮಾಡಿರುವ ಎನ್ಐಎ ಇವರ ಸುಳಿವು ನೀಡುವವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ.

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್ ಹುಸೈನ್ ಶಾಜೀಬ್ ಹಾಗೂ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹನ ಫೋಟೋ ಬಿಡುಗಡೆ ಮಾಡಿರುವ ಎನ್ಐಎ ಇವರ ಸುಳಿವು ನೀಡುವವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ.

ರಾಮೇಶ್ವರಂ ಕೆಫ್​ ಸ್ಫೋಟ ಪ್ರಕರಣ ಸಂಬಂಧ ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್​ ಶರೀಫ್ ಎಂಬಾತನನ್ನು ನಿನ್ನೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತಿಬ್ಬರ ಪ್ರಮುಖ ಆರೋಪಗಳ ಪತ್ತೆಗೆ ಬಲೆ ಬೀಸಿದೆ. 'ಬಾಂಬರ್' ಮುಸಾವೀರ್ ಹುಸೇನ್ ಶಾಜಿಬ್ ಹಾಗೂ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹಾನ ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು, ಈ ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್​ಐಎ ಘೋಷಣೆ ಮಾಡಿದೆ.

ಬೆಂಗಳೂರಿನ ಬ್ರೂಕ್‌ಫೀಲ್ಡ್‌ನ ಐಟಿಪಿಎಲ್ ರಸ್ತೆಯಲ್ಲಿರುವ ಜನನಿಬಿಡ ಜನಪ್ರಿಯ ರೆಸ್ಟೋರೆಂಟ್‌ನಲ್ಲಿ ಮಾರ್ಚ್ 1 ರಂದು ಹ್ಯಾಂಡ್‌ಬ್ಯಾಗ್‌ನಲ್ಲಿ ಬಚ್ಚಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡ ನಂತರ ನೌಕರರು ಮತ್ತು ಗ್ರಾಹಕರು ಸೇರಿದಂತೆ ಒಂಬತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಫೋಟದಿಂದ ಆಸ್ತಿಪಾಸ್ತಿಗೂ ಹಾನಿಯಾಗಿದೆ.

ಇನ್ನು ಬಾಂಬ್ ತಯಾರಿಕೆ ಮಾಡಿದ ಆರೋಪಿ ಮುಜಾಮಿಲ್ ಶರೀಫ್‌ನನ್ನು 7 ದಿನಗಳ ಕಾಲ ಎನ್‌ಐಎ ವಶಕ್ಕೆ ಒಪ್ಪಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಆರೋಪಿ ಮುಜಾಮಿಲ್ ಷರೀಫ್ ಬಾಂಬ್‌ ತಯಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದನು. ಅಲ್ಲದೆ ಉಳಿದ ಆರೋಪಿಗಳ ಜೊತೆ ಸಂಪರ್ಕದ ಹೊಂದಿದ್ದ ಬಗ್ಗೆಯೂ ಎನ್‌ಐಎ ಮಾಹಿತಿ ಸಂಗ್ರಹ ಮಾಡಿತ್ತು.

ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಷರೀಫ್ ಲಾಜಿಸ್ಟಿಕ್ ಬೆಂಬಲವನ್ನು ನೀಡಿದ್ದ ಎಂದು ಈ ವರೆಗಿನ ಎನ್ಐಎ ತನಿಖೆಗಳು ಬಹಿರಂಗಪಡಿಸಿವೆ. ಈ ಮೂವರು ಆರೋಪಿಗಳ ಮನೆಗಳು ಹಾಗೂ ಇತರ ಶಂಕಿತರ ಮನೆಗಳು ಮತ್ತು ಅಂಗಡಿಗಳ ಮೇಲೆ ಇಂದು ದಾಳಿ ನಡೆಸಲಾಯಿತು. ತಪಾಸಣೆಯ ವೇಳೆ ನಗದು ಸಹಿತ ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಮತ್ತು ಸ್ಫೋಟದ ಹಿಂದಿನ ದೊಡ್ಡ ಪಿತೂರಿಯನ್ನು ಬಯಲಿಗೆಳೆಯಲು ಕೇಂದ್ರ ಭಯೋತ್ಪಾದನಾ ನಿಗ್ರಹ ಸಂಸ್ಥೆ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT