ಬನ್ನೇರುಘಟ್ಟ ಮುಖ್ಯ ರಸ್ತೆಯ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ ನಕ್ಷೆ 
ರಾಜ್ಯ

ಮೆಟ್ರೊ ಕಾಮಗಾರಿ: ಬನ್ನೇರುಘಟ್ಟ ಮುಖ್ಯ ರಸ್ತೆಯ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ 1 ವರ್ಷ ವಾಹನ ಸಂಚಾರ ನಿಷೇಧ

ಬೆಂಗಳೂರಿನ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿನ ಮೆಟ್ರೋ ಕಾಮಗಾರಿ ನಿರ್ವಹಣೆಯ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಪಥವಾದ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ನಾಡಿದ್ದು ಸೋಮವಾರ ಅಂದರೆ ಏಪ್ರಿಲ್ 1ರಿಂದ ಮುಂದಿನ ವರ್ಷ 2025 ಮಾರ್ಚ್ 30ರವರೆಗೆ (ಒಂದು ವರ್ಷಗಳ ಕಾಲ) ಸಂಪೂರ್ಣವಾಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗುತ್ತಿದೆ.

ಬೆಂಗಳೂರು: ಬೆಂಗಳೂರಿನ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿನ ಮೆಟ್ರೋ ಕಾಮಗಾರಿ ನಿರ್ವಹಣೆಯ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಪಥವಾದ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ನಾಡಿದ್ದು ಸೋಮವಾರ ಅಂದರೆ ಏಪ್ರಿಲ್ 1ರಿಂದ ಮುಂದಿನ ವರ್ಷ 2025 ಮಾರ್ಚ್ 30ರವರೆಗೆ (ಒಂದು ವರ್ಷಗಳ ಕಾಲ) ಸಂಪೂರ್ಣವಾಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗುತ್ತಿದೆ ಎಂದು ಬೆಂಗಳೂರು ಮೆಟ್ರೋ ಸಂಚಾರ ನಿಗಮ ನಿಯಮಿತ(BMRCL) ಪ್ರಕಟಣೆ ಹೊರಡಿಸಿದೆ.

ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯ ನಿರ್ಮಾಣಕ್ಕೆ ಅನುಕೂಲವಾಗುವಂತೆ, ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಪಥವನ್ನು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರವನ್ನು ದಿನಾಂಕ 01.04.2024 ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುವುದು ಎಂದು ತಿಳಿಸಿದೆ.

ಈ ಸಂಬಂಧ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್ ಕಡೆಯಿಂದ ಚಲಿಸುವ ವಾಹನಗಳು ಆನೆಪಾಳ್ಯ ಜಂಕ್ಷನ್ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಭೋಷ್ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ ಎಡಕ್ಕೆ ತಿರುಗಿ ಚಲಿಸಬೇಕು. ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೆ ವ್ಯತ್ಯಯವಿರುವುದಿಲ್ಲ. ಡೈರಿ ಸರ್ಕಲ್‌ನಿಂದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್ ಗಾರ್ಡನ್‌ನ 7ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳುವುದು ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ