ರಾಜ್ಯ

Hottest day for Bengaluru: ನಿನ್ನೆಯ ದಾಖಲೆ ಮುರಿದ ಬೆಂಗಳೂರು, ಇಂದಿನ ತಾಪಮಾನ ಎಷ್ಟು ಗೊತ್ತಾ?

ಕರ್ನಾಟಕದಲ್ಲಿ ಬೇಸಿಗೆ ಧಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ನಿನ್ನೆ ದಾಖಲೆಯ ತಾಪಮಾನ ದಾಖಲಾಗಿದ್ದ ಬೆಂಗಳೂರಿನಲ್ಲಿ ಇಂದಿನ ತಾಪಮಾನ ಆ ದಾಖಲೆಯನ್ನೂ ಮೀರಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆ ಧಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ನಿನ್ನೆ ದಾಖಲೆಯ ತಾಪಮಾನ ದಾಖಲಾಗಿದ್ದ ಬೆಂಗಳೂರಿನಲ್ಲಿ ಇಂದಿನ ತಾಪಮಾನ ಆ ದಾಖಲೆಯನ್ನೂ ಮೀರಿಸಿದೆ.

ಕಳೆದ 5 ವರ್ಷಗಳಲ್ಲಿ ಬೆಂಗಳೂರು ನಗರವು ಅತ್ಯಂತ ಬಿಸಿ ದಿನವನ್ನು (warmest March day) ನಿನ್ನೆ ಅಂದರೆ ಮಾರ್ಚ್ 29ರನ್ನು ಕಂಡಿತ್ತು. ಆದರೆ ಇಂದು ಅದನ್ನೂ ಮೀರಿಸಿದ ತಾಪಮಾನ ದಾಖಲಾಗಿದೆ.

ನಿನ್ನೆ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿ, ದಾಖಲೆ ಬರೆದಿತ್ತು. ಆದರೆ ಇಂದು 36.6 ಡಿಗ್ರಿ ತಾಪಮಾನ ದಾಖಲಾಗಿ ಈ ದಾಖಲೆಯನ್ನು ಮೀರಿಸಿದೆ. ಆ ಮೂಲಕ ಬೆಂಗಳೂರು ನಗರವು ಅತ್ಯಂತ ಬಿಸಿ ದಿನ ಕಂಡಿದೆ. ಇದು ಕಳೆದ 5 ವರ್ಷಗಳಲ್ಲಿ ಗರಿಷ್ಠ ಎಂದು ಹವಾಮಾನ ಇಲಾಖೆ ಹೇಳಿದೆ.

ಮಾರ್ಚ್ ಕೊನೆಯ ವಾರದಲ್ಲಿ ಸಾಮಾನ್ಯ ಸರಾಸರಿ ನಿರೀಕ್ಷಿತ ತಾಪಮಾನವು 34.2 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಈ ಹಿಂದೆ 1996 ರಲ್ಲಿ ಮಾರ್ಚ್ ತಿಂಗಳಿನಲ್ಲಿ ಬೆಂಗಳೂರು ಅತ್ಯಧಿಕ ಗರಿಷ್ಠ ತಾಪಮಾನ 37.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ವಿರುದ್ಧ ದಿಕ್ಕಿನಲ್ಲಿ ಗಾಳಿ, ಮಳೆಯೂ ದೂರ

ಬೆಂಗಳೂರಿನಲ್ಲಿ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಮಾರ್ಚ್ ಕೊನೆಯ ವಾರದಲ್ಲಿ ನಿರೀಕ್ಷೆಯಂತೆ ಬೆಂಗಳೂರಿನಲ್ಲಿ ಅಲ್ಪ ಪ್ರಮಾಣದಲ್ಲಿಯೂ ಕೂಡ ಮಳೆಯಾಗಲಿಲ್ಲ. ಇದಕ್ಕೆ ಕಾರಣ ಗಾಳಿ ವಿರುದ್ಧ ದಿಕ್ಕಿನಲ್ಲಿ ಬೀಸುತ್ತಿರುವುದು. ತಮಿಳುನಾಡು ಮತ್ತು ಮಹಾರಾಷ್ಟ್ರದ ನಡುವೆ ಗಾಳಿ ಸ್ಥಗಿತಗೊಂಡಿದೆ ಎಂದು ಐಎಂಡಿಯ ಹಿರಿಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನೂ ಹೆಚ್ಚಾಗಲಿದೆ ತಾಪಮಾನ!

ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಐಎಂಡಿ ಬುಧವಾರ ತಿಳಿಸಿದೆ. ಇದರ ಜೊತೆಗೆ ಏಪ್ರಿಲ್ ಎರಡನೇ ವಾರದಿಂದ ಬೆಂಗಳೂರಿನಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೂಡ ಸಂಸ್ಥೆ ನೀಡಿದೆ. ಬೆಂಗಳೂರು ಏಪ್ರಿಲ್‌ನಲ್ಲಿ ವಾಡಿಕೆಗಿಂತ ಸ್ವಲ್ಪ ಹೆಚ್ಚು ಮಳೆಯಾಗಬಹುದು ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?