ಡಾ ಜಿ ಪರಮೇಶ್ವರ್  
ರಾಜ್ಯ

ಯಾರನ್ನೇ ಆದರೂ ಏಕಾಏಕಿ ಬಂಧಿಸಲಾಗದು, ಪುರಾವೆಗಳು ಬೇಕು: ಪ್ರಜ್ವಲ್ ರೇವಣ್ಣ ಬಂಧನ ಬಗ್ಗೆ ಡಾ ಜಿ ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ವಿಡಿಯೋ ಪ್ರಕರಣದಲ್ಲಿ ಕೇಸು ದಾಖಲಾಗಿದ್ದರೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್​ಡಿ ರೇವಣ್ಣರನ್ನು ಇನ್ನೂ ಏಕೆ ಬಂಧಿಸಿಲ್ಲ ಎಂಬ ಪ್ರಶ್ನೆ ಮತ್ತು ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದ್ದು ಇದಕ್ಕೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾರನ್ನೇ ಆದರೂ ಏಕಾಏಕಿ ಬಂಧಿಸಲಾಗುವುದಿಲ್ಲ. ಅದಕ್ಕೆ ಪುರಾವೆಗಳು, ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ. ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಈ ಅಂಶಗಳನ್ನೆಲ್ಲ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು.

ಅಪರಾಧ ದಂಡಸಂಹಿತೆಯ (CRPC) ಸೆಕ್ಷನ್ 41ಎ ಅಡಿ‌ ನೊಟೀಸ್ ಕೊಟ್ಟಿದ್ದಾರೆ. ಅದರಂತೆ, ಆರೋಪಿಗಳು 24 ಗಂಟೆಯ ಒಳಗೆ ಬಂದು ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದೇ ಹೋದರೆ ಎಸ್​ಐಟಿ ತಂಡ ಮುಂದಿನ ಪ್ರಕ್ರಿಯೆ ಮಾಡಲಿದೆ. ನಾವು ಎಸ್​ಐಟಿ ರಚನೆ ಮಾಡಿ ತನಿಖೆಗೆ ವಹಿಸಿದ್ದೇವೆ ಎಂದು ಹೇಳಿದರು.

ರಾಜ್ಯ ಸರ್ಕಾರ ಏನೂ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವಂತಹದ್ದು ಏನೂ ಇಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ಇದರಲ್ಲಿ ಅನೇಕ ಮಹಿಳೆಯರ ಜೀವನದ ಪ್ರಶ್ನೆ ಇದೆ. ಇಷ್ಟ ಬಂದ ಹಾಗೆ ತನಿಖೆ‌ ಮಾಡಲು ಆಗುವುದಿಲ್ಲ. ಹಾಗಾಗಿಯೇ ಎಸ್​ಐಟಿ ರಚನೆ ಮಾಡಿದ್ದೇವೆ ಎಂದು ಪರಮೇಶ್ವರ ಹೇಳಿದರು.

ಎಸ್​ಐಟಿ ರಚನೆ ಬಳಿಕವೂ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಲೀಕ್ ಆದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದೆಲ್ಲವನ್ನು ಎಸ್​ಐಟಿ ಗಮನಿಸುತ್ತದೆ. ಅದಕ್ಕೆ ನಾವೇನೂ ಹೇಳಲು ಬರುವುದಿಲ್ಲ ಎಂದರು.

ಹೆಚ್​ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ನಡುವಣ ಆರೋಪ ಪ್ರತ್ಯಾರೋಪಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಬಹಳ ಜನ ಅದರ ಬಗ್ಗೆ ಹೇಳಿಕೆ ಕೊಡ್ತಿದ್ದಾರೆ. ಅದಕ್ಕೆಲ್ಲ ನಾನು ಉತ್ತರ ಕೊಡಲು ಸಾಧ್ಯವಿಲ್ಲ. ತನಿಖಾ ವರದಿ ಬಂದ ಮೇಲೆ ಏನು ಸತ್ಯಾಸತ್ಯತೆ ಇದೆ ಎಂಬುದರ ಮೇಲೆ ಕ್ರಮ ಆಗುತ್ತದೆ‌. ತನಿಖಾ ವರದಿ ಬರುವ ವರೆಗೂ ಯಾರೂ ಹೇಳಿಕೆ ಕೊಡಬಾರದು ಎಂದರು.

ವಿದೇಶದಲ್ಲಿರೋ ಪ್ರಜ್ವಲ್ ಕರೆ ತರುವ ವಿಚಾರವಾಗಿ ಮಾತನಾಡಿ, ಎಸ್​​ಐಟಿ ಈಗಾಗಲೇ ನೊಟೀಸ್ ಜಾರಿ ಮಾಡಿದೆ. ಪ್ರಜ್ವಲ್ ವಿದೇಶಕ್ಕೆ ಹೋಗಿರುವ ಬಗ್ಗೆ ಎಲ್ಲ ಮಾಹಿತಿ ಇದೆ. ವಾಪಸ್ ಕರೆದುಕೊಂಡು ಬರಲು ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಎಸ್​ಐಟಿ ಮಾಡಲಿದೆ. ಇದಕ್ಕೆ ಕೇಂದ್ರ ಸರ್ಕಾರದ ಸಹಕಾರವೂ ಬೇಕಾಗಬಹುದು. ಅಥವಾ ಎಸ್​ಐಟಿ ತಂಡದವರೇ ಕರೆದುಕೊಂಡು ಬರಬಹುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT