ಬೆಂಗಳೂರು: ಇಡೀ ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿರುವ ಸೆಕ್ಸ್ ಹಗರಣಕ್ಕೆ ಸಂಬಂಧಿದಂತೆ ಇದೇ ಮೊದಲ ಬಾರಿದೆ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದು, ವಿಚಾರಣೆಗೆ ಹಾಜರಾಗಲು ಸಮಯ ಬೇಕು ಎಂದಿದ್ದಾರೆ.
ಮಹಿಳೆಯರ ಮೇಲಿನ ಲೈಂಗಿಕ ದೌರ್ಜುನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಾದ ಎಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣಗೆ ಈಗಾಗಲೇ ಎಸ್ಐಟಿ ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಆದರೆ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದು, ಪ್ರಕರಣದ ಎ1 ಆರೋಪಿ ಎಚ್ ಡಿ ರೇವಣ್ಣ ನಾಳೆ ಅಂದರೆ ಮೇ 2ರಂದು ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಈ ನಡುವೆ ಪ್ರಕರಣದ 2ನೇ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ದಿಢೀರ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರತ್ಯಕ್ಷರಾಗಿದ್ದು, ಎಸ್ಐಟಿ ನೋಟಿಸ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. 'ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಆದ ಕಾರಣ ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ" ಎಂದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.