ಸಂಗ್ರಹ ಚಿತ್ರ 
ರಾಜ್ಯ

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಹಗರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಬಿ.ಎನ್‌. ಜಗದೀಶ್‌ ನೇಮಕ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.

ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಮತ್ತು ಅವರ ತಂದೆ ಎಚ್‌ ಡಿ ರೇವಣ್ಣ ವಿರುದ್ಧ ಹೊಳೆನರಸೀಪುರದ ಟೌನ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಪಣ ದಾಖಲಾಗಿದೆ.

ಇದರಂತೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಲು ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರಾಗಿರುವ ಬಿ ಎನ್‌ ಜಗದೀಶ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಮುಂದಿನ ಆದೇಶದವರೆಗೆ ನೇಮಕ ಮಾಡಿ ಮಂಗಳವಾರ ಆದೇಶಿಸಲಾಗಿದೆ.

ದಂಡ ಪ್ರಕ್ರಿಯಾ ಸಂಹಿತೆ 1975ರ ಸೆಕ್ಷನ್‌ 24ರ ಉಪ ಸೆಕ್ಷನ್‌ 8ರ ಅಡಿಯಲ್ಲಿ ಜಗದೀಶ್‌ ಅವರ ನೇಮಕ ಮಾಡಲಾಗಿದೆ.

ಸಂತ್ರಸ್ತ ಮಹಿಳೆ ನೀಡಿದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ಪ್ರಜ್ವಲ್‌ ರೇವಣ್ಣ ಮತ್ತು ಅವರ ತಂದೆ ಮಾಜಿ ಸಚಿವ ಎಚ್‌ ಡಿ ರೇವಣ್ಣ ವಿರುದ್ಧ ಏಪ್ರಿಲ್‌ 28ರಂದು ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 354(ಎ), 354(ಡಿ), 506, 509 ಅಡಿ ಎಫ್‌ಐಆರ್‌ ದಾಖಲಾಗಿದೆ. ಇದರ ತನಿಖೆಯನ್ನು ಹಿರಿಯ ಐಪಿಎಸ್‌ ಅಧಿಕಾರಿ ಬಿ ಕೆ ಸಿಂಗ್‌ ನೇತೃತ್ವದ ವಿಶೇಷ ತನಿಖಾ ತಂಡ ಆರಂಭಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್‌ ಯುದ್ಧಕ್ಕೆ ವಿರೋಧ: Hormuz ಬಂದ್ ಮಾಡಿದ್ರೆ ಜಾಗತಿಕ ವ್ಯಾಪಾರಕ್ಕೆ ಮಾರಕ: ಪುಟಿನ್-ಕ್ಸಿ ಜಂಟಿ ಹೇಳಿಕೆ

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

IPL 2026: ಮತ್ತೆ ಮುಗ್ಗರಿಸಿದ MI, KKRಗೆ 4 ವಿಕೆಟ್ ಜಯ, ಮುಂದುವರೆದ ಪ್ಲೇಆಫ್ ಸಸ್ಪನ್ಸ್!

'ದೇವಸ್ಥಾನಗಳಲ್ಲಿ ಅವಮಾನ ಅನುಭವಿಸಿದ್ದೆ': ಇಸ್ಲಾಂಗೆ ಮತಾಂತರವಾದ ತಮಿಳು ನಟ ಜೈ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?

SCROLL FOR NEXT