ಗುರುವಾರ ಸಂಜೆ ಸುರಿದ ಸಾಧಾರಣ ಮಳೆಯಿಂದ ಬೆಂಗಳೂರಿನ ನಿವಾಸಿಗಳಿಗೆ ಬಿಸಿಲಿನ ಝಳದಿಂದ ಕೊಂಚ ರಿಲೀಫ್ ಸಿಕ್ಕಿದೆ. 
ರಾಜ್ಯ

ಬೆಂಗಳೂರು: ಕಳೆದ 123 ವರ್ಷಗಳಲ್ಲಿ ಮೊದಲ ಬಾರಿಗೆ ಏಪ್ರಿಲ್‌ನಲ್ಲಿ ಒಣ ಹವೆ, 159 ದಿನಗಳ ನಂತರ ಮಳೆ!

ಕಳೆದ 123 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ನಗರದಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ಒಣಹವೆ ಉಂಟಾಗಿದೆ. ಆದರೆ, ಇದೀಗ 159 ದಿನಗಳ ಅಂತರದ ನಂತರ ಗುರುವಾರ ನಗರದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.

ಬೆಂಗಳೂರು: ಕಳೆದ 123 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ನಗರದಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ಒಣಹವೆ ಉಂಟಾಗಿದೆ. ಆದರೆ, ಇದೀಗ 159 ದಿನಗಳ ಅಂತರದ ನಂತರ ಗುರುವಾರ ನಗರದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರು ನಿರ್ದೇಶಕ ಎನ್ ಪುವಿಯರಸನ್ ಪ್ರಕಾರ, 1901 ರಿಂದ 2024 ರವರೆಗೆ, ನಗರದಲ್ಲಿ ಏಪ್ರಿಲ್‌ನಲ್ಲಿ ಮಳೆಯಿಲ್ಲದಿರುವುದು ಇದೇ ಮೊದಲ ಬಾರಿಗೆ. ಗುರುವಾರ ಸಂಜೆ ನಗರದ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿರುವ ವರದಿಯಾಗಿದೆ. ಆದರೆ ಐಎಂಡಿಯ ವೀಕ್ಷಣಾಲಯಗಳು ಯಾವುದೇ ಮಳೆಯನ್ನು ದಾಖಲಿಸಿಲ್ಲ ಎಂದಿದ್ದಾರೆ.

ಆದಾಗ್ಯೂ, ಮೋಡಗಳ ರಚನೆ ಮತ್ತು ಸಂಜೆಯ ಹವಾಮಾನ ಪರಿಸ್ಥಿತಿಗಳಲ್ಲಿನ ಹಠಾತ್ ಬದಲಾವಣೆಯು ಬೇಸಿಗೆಯಿಂದ ತಣಿದಿದ್ದ ಬೆಂಗಳೂರಿನ ನಿವಾಸಿಗಳಿಗೆ ಕೊಂಚ ಮಟ್ಟದ ರಿಲೀಫ್ ನೀಡಿದೆ.

ಸ್ಥಳೀಯ ಹವಾಮಾನ ಪರಿಸ್ಥಿತಿಯಿಂದಾಗಿ ನಗರದ ಕೆಲವೆಡೆ ಮಳೆಯಾಗಲಿದೆ. ಆದರೆ, ಐದು ದಿನಗಳ ನಂತರ ಗುಡುಗು ಸಹಿತ ಮಳೆಯಾಗಲಿದೆ. ಕ್ಲುಮಿನೊ-ನಿಂಬಸ್ ಮೋಡಗಳ ರಚನೆ ಮತ್ತು ಗುಡುಗು ಸಹಿತ ಮಳೆಯು ಸ್ಥಳೀಯ ಹವಾಮಾನ ಪರಿಸ್ಥಿತಿಯಿಂದಾಗಿ ಸಂಭವಿಸುತ್ತದೆ ಎಂದು ಪುವಿಯರಸನ್ ಹೇಳಿದ್ದಾರೆ.

ದಕ್ಷಿಣ ಒಳನಾಡಿನಲ್ಲಿ ಹೆಚ್ಚುತ್ತಿರುವ ತಾಪಮಾನಕ್ಕೆ ಕೊಂಚ ವಿರಾಮ ಸಿಕ್ಕಿದ್ದರೆ, ಉತ್ತರ ಒಳನಾಡಿನಲ್ಲಿ ತಾಪಮಾನ ಮುಂದುವರಿಯಲಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?