ರಾಜ್ಯ

4 ವರ್ಷಗಳ ಪದವಿ ಅಧ್ಯಯನ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಅಸ್ತು!

2024-25ರ ಹೊಸ ಪ್ರವೇಶಕ್ಕೆ ನಾಲ್ಕು ವರ್ಷಗಳ ಪದವಿ ಕೋರ್ಸ್‌ಗೆ ಹೊಸ ಅರ್ಜಿಗಳನ್ನು ಅನುಮತಿಸದಂತೆ ಈಗಾಗಲೇ ವಿಸಿಗಳಿಗೆ ನಿರ್ದೇಶನ ನೀಡಲಾಗಿದೆ.

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ–2020 (ಎನ್‌ಇಪಿ) ಭಾಗವಾಗಿದ್ದ ನಾಲ್ಕು ವರ್ಷಗಳ ಪದವಿ ಸ್ಥಗಿತಗೊಳಿಸಿ, ಮೂರು ವರ್ಷಗಳ ಪದವಿ ವ್ಯಾಸಂಗ ಮುಂದುವರಿಸಲು ಎಲ್ಲ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜುಗಳಿಗೆ ಸೂಚನೆ ನೀಡಿರುವ ಉನ್ನತ ಶಿಕ್ಷಣ ಇಲಾಖೆ, ಗೊಂದಲಕ್ಕೆ ತೆರೆ ಎಳೆದಿದೆ.

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ಮಾಜಿ ಅಧ್ಯಕ್ಷ ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗ ನೀಡಿದ ಸಲಹೆಗಳ ಆಧಾರದ ಮೇಲೆ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ಕಾಂಗ್ರೆಸ್ ಸರ್ಕಾರವು 2023 ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP 2020) ರದ್ದುಗೊಳಿಸಿದೆ. ಇಲಾಖೆಯ ಮೂಲಗಳ ಪ್ರಕಾರ, ತಮ್ಮ ಪದವಿಯ ಮೂರನೇ ವರ್ಷದ ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕೆ ಅಡ್ಡಿಯಾಗದಂತೆ ನಾಲ್ಕನೇ ವರ್ಷವನ್ನು ಮುಂದುವರಿಸಲು ಅನುಮತಿಸಲಾಗುವುದು. ಆದಾಗ್ಯೂ, ಇದು ಕರ್ನಾಟಕದಲ್ಲಿ ಕೊನೆಯ ಎನ್‌ಇಪಿ ಬ್ಯಾಚ್ ಆಗಿರುತ್ತದೆ.

ಮೇ 7 ರಂದು ನಡೆಯಲಿರುವ ಮೂರನೇ ಹಂತದ ಮತದಾನಕ್ಕಾಗಿ ಕಾಯುತ್ತಿದ್ದೇವೆ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣೆ ಮುಗಿದ ಬಳಿಕ ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು (ಎಚ್‌ಇಐಗಳು) ಮತ್ತು ಉಪಕುಲಪತಿಗಳಿಗೆ ಅಧಿಕೃತ ಆದೇಶ ಹೊರಡಿಸಲುು ಪತ್ರಿಕಾಗೋಷ್ಠಿ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏತನ್ಮಧ್ಯೆ, 2024-25ರ ಹೊಸ ಪ್ರವೇಶಕ್ಕೆ ನಾಲ್ಕು ವರ್ಷಗಳ ಪದವಿ ಕೋರ್ಸ್‌ಗೆ ಹೊಸ ಅರ್ಜಿಗಳನ್ನು ಅನುಮತಿಸದಂತೆ ಈಗಾಗಲೇ ವಿಸಿಗಳಿಗೆ ನಿರ್ದೇಶನ ನೀಡಲಾಗಿದೆ. ಎನ್‌ಇಪಿ 2020 ಜಾರಿಯಾದಾಗಿನಿಂದ, ಶುಲ್ಕ ಹೆಚ್ಚಳ, ಮೂಲಸೌಕರ್ಯಗಳ ಕೊರತೆ, ಅಧ್ಯಾಪಕರ ಕೊರತೆ ಮತ್ತು ಅಸಮರ್ಪಕ ಶೈಕ್ಷಣಿಕ ಸಂಪನ್ಮೂಲ ಹಾಗೂ ಬದಲಾವಣೆಯ ವಿರುದ್ಧ ವಿದ್ಯಾರ್ಥಿ ಸಮುದಾಯಗಳು ಹಲವು ಪ್ರತಿಭಟನೆ ನಡೆಸಿದ್ದವು. ಆಯೋಗವು ಸಲ್ಲಿಸಿರುವ ಮಧ್ಯಂತರ ವರದಿ ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT