ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ 
ರಾಜ್ಯ

Prajwal Revanna Case: ರೇವಣ್ಣ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ; ಮೈಸೂರಿನಲ್ಲಿ ಅಪಹರಣ ಪ್ರಕರಣ ದಾಖಲು!

ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತನ್ನ ತಾಯಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ.

ಮೈಸೂರು: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತನ್ನ ತಾಯಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ.

ಹೌದು.. ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣಗೆ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮತ್ತೊಂದು ಸಂಕಷ್ಟ ಎದುರಾಗಿದ್ದು, ವ್ಯಕ್ತಿಯೊಬ್ಬರು ತನ್ನ ತಾಯಿ ನಾಪತ್ತೆಯಾಗಿದ್ದಾರೆ. ಬಿಡುಗಡೆಯಾದ ಅಶ್ಲೀಲ ವಿಡಿಯೊದಲ್ಲಿ ಅವರ ಚಿತ್ರವೂ ಇತ್ತು, ಬಳಿಕ ಅವರು ಕಣ್ಮರೆಯಾಗಿದ್ದಾರೆ ಎಂದು ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ನಾಪತ್ತೆಯಾಗಿರುವ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದಾಗಿದ್ದಾರೆ.

'ಅಶ್ಲೀಲ ವಿಡಿಯೋಗಳಲ್ಲಿ ತಾಯಿ ಕೂಡ ಇದ್ದಾರೆ'

‘ಅಶ್ಲೀಲ ವಿಡಿಯೋ ವಿವಾದದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ’ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಅನ್ವಯ ಹೆಚ್​ಡಿ ರೇವಣ್ಣ ವಿರುದ್ಧ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದೆ.

ಈ ಮಧ್ಯೆ, ಮೈಸೂರು ಪೊಲೀಸ್ ಹೆಚ್ಚುವರಿ ಆಯುಕ್ತೆ ಕೆಆರ್ ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಮನೆಗೆಲಸಕ್ಕಿದ್ದ ಮಹಿಳೆ

ಹೆಚ್​ಡಿ ರೇವಣ್ಣ ವಿರುದ್ಧ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಅಪಹರಿಸಿದ ಆರೋಪ ಹೊರಿಸಲಾಗಿದೆ. ಹೊಳೇನರಸಿಪುರದ ಚೆನ್ನಾಂಬಿಕ ಥಿಯೇಟರ್ ಪಕ್ಕ ಇರುವ ಮನೆಯಲ್ಲಿ ಮಹಿಳೆ ಸುಮಾರು 6 ವರ್ಷ ಕೆಲಸ‌ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ಸತೀಶ್ ಎಂಬುವವರು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಭವಾನಿ ರೇವಣ್ಣ ಅವರು ಕರೆಯುತ್ತಿದ್ದಾರೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?