ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಎಸಿ ಸ್ಫೋಟ Gas Blast at Kalyan Jewellers in Ballari
ರಾಜ್ಯ

ವಿಡಿಯೋ: ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಎಸಿ ಸ್ಫೋಟ; 6 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಗಣಿ ಜಿಲ್ಲೆ ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದ್ದು, ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್‌ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡಿದೆ.

ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್‌ ಎಂಬವರಿಗೆ ಗಂಭೀರ ಗಾಯವಾಗಿದ್ದು, ಮೂವರು ಸಿಬ್ಬಂದಿಗೆ ಸಣ್ಣ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ವಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜ್ಯುವೆಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ಡ್ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿತ್ತು. ಗ್ಯಾಸ್ ಭರ್ತಿ ಮಾಡಲು ಇಬ್ಬರು ಕಾರ್ಮಿಕರು ಮಳಿಗೆಗೆ ಬಂದಿದ್ದರು. ಎಸಿಗೆ ಗ್ಯಾಸ್ ತುಂಬಿಸುವಾಗ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಅಂಗಡಿ ಮತ್ತು ಸುತ್ತಮುತ್ತಲಿನ ಕಿಟಕಿಗಳು ಒಡೆದು ಹೋಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Extends Dasara Holiday: ಸರ್ಕಾರಿ, ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅ.18ರವರೆಗೆ ರಜೆ ಘೋಷಿಸಿದ ಸಿಎಂ ಸಿದ್ದರಾಮಯ್ಯ!

ಡಿಕೆಶಿಯ 'ಸುರಂಗದ ಹುಚ್ಚಿ'ನಿಂದ ಲಾಲ್‌ಬಾಗ್ ಸಸ್ಯೋದ್ಯಾನಕ್ಕೆ ಅಪಾಯ- ಆರ್. ಅಶೋಕ್

ನದಿಗೆ ಬಟ್ಟೆ ಹೊಗೆಯಲು ಹೋಗಿದ್ದ ಮಹಿಳೆಯನ್ನು ಎಳೆದೊಯ್ದ ಮೊಸಳೆ: ಭಯಭೀತರಾದ ಜನ, Video!

4 ಲಕ್ಷ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠದ ಅಗತ್ಯವಿಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಗುಡುಗಿದ ಭಾರತ

ಪರಿಶಿಷ್ಟ ಜಾತಿಯವರು ಬೌದ್ಧ ಧರ್ಮಕ್ಕೆ ಮತಾಂತರ ಆದ್ರು 'SC ಜಾತಿ ಪ್ರಮಾಣಪತ್ರ': ರಾಜ್ಯ ಸರ್ಕಾರದ ಆದೇಶ!

SCROLL FOR NEXT