ಪಂಚಮಸಾಲಿ ಸಮಾವೇಶದ ಸಮಯದಲ್ಲಿ ಪಂಚಮಸಾಲಿ (ಲಿಂಗಾಯತ) ಸಮುದಾಯದ ಸದಸ್ಯರ ಸಂಗ್ರಹ ಚಿತ್ರ PTI
ರಾಜ್ಯ

ಹಿಂದುಳಿದ ವರ್ಗ, ದಲಿತ ಮತಗಳ ಮೇಲೆ ಬಿಜೆಪಿ ಕಣ್ಣು: ಲಿಂಗಾಯತ ಉಪ ಪಂಗಡಗಳ ಸೆಳೆಯಲು ಕಾಂಗ್ರೆಸ್ ಮುಂದು!

2019 ರಲ್ಲಿ ಇಡೀ ಉತ್ತರ ಕರ್ನಾಟಕವನ್ನು ಗೆದ್ದ ಬಿಜೆಪಿಯು ವೀರಶೈವ-ಲಿಂಗಾಯತ ಸಮುದಾಯದ ಬೆಂಬಲ ಪಡೆಯುವ ಭರವಸೆ ಇಟ್ಟುಕೊಂಡಿದೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದಾರೆ.

ಬೆಂಗಳೂರು: ಮೇ 7 ರಂದು ಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಪ್ರಚಾರವು ತೀವ್ರಗೊಂಡಿದ್ದು, ಅಲ್ಪಸಂಖ್ಯಾತರ ಮತಗಳು ಮಾತ್ರವಲ್ಲದೆ ಕಾಂಗ್ರೆಸ್ ಕ್ರೋಡೀಕರಿಸಲು ಪ್ರಯತ್ನಿಸುತ್ತಿರುವ ಹಿಂದುಳಿದ ವರ್ಗಗಳು ಮತ್ತು ದಲಿತ ಮತದಾರರ ಒಂದು ಭಾಗವನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ.

2019 ರಲ್ಲಿ ಇಡೀ ಉತ್ತರ ಕರ್ನಾಟಕವನ್ನು ಗೆದ್ದ ಬಿಜೆಪಿಯು ವೀರಶೈವ-ಲಿಂಗಾಯತ ಸಮುದಾಯದ ಬೆಂಬಲ ಪಡೆಯುವ ಭರವಸೆ ಇಟ್ಟುಕೊಂಡಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದಾರೆ. ಆಗ ಸಹಜವಾಗಿಯೇ ಅದು ‘ಮೋದಿ ಅಲೆ’ಯ ಮೇಲೆ ನಿಂತಿದೆ. ಆದರೆ ಹಿಂದುಳಿದ ವರ್ಗಗಳು ಮತ್ತು ದಲಿತರ ಮತಗಳನ್ನು ಸೆಳೆಯಬಲ್ಲ ಪ್ರಮುಖ ಮುಖಗಳು ಪಕ್ಷಕ್ಕೆ ಇಲ್ಲ.

ಕುರುಬ ಜನಾಂಗದವರಾದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಂಡಾಯವೆದ್ದು ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಎಸ್‌ಟಿ ನಾಯಕ, ಮಾಜಿ ಸಚಿವ ಬಿ.ಶ್ರೀರಾಮುಲು ಬಳ್ಳಾರಿಯಿಂದ ಕಣಕ್ಕಿಳಿದಿದ್ದಾರೆ. ಅವರ ಸೇವೆಯನ್ನು ಪಕ್ಷವು ಬಳಸಿಕೊಳ್ಳಬಹುದಿತ್ತು ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ. ಅದಕ್ಕಾಗಿಯೇ ಪಕ್ಷವು ಕುರುಬ ಜನಾಂಗದವರಾದ ಮಾಜಿ ಸಚಿವ ಬೈರತಿ ಬಸವರಾಜ್ ಅವರನ್ನು ಬಳಸಿಕೊಳ್ಳುತ್ತಿದೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ, ಯಡಿಯೂರಪ್ಪ ಮತ್ತು ಎಚ್‌ಡಿ ದೇವೇಗೌಡರು ನಿರ್ವಿವಾದ ಸಮುದಾಯದ ನಾಯಕರು. ಕಳೆದ ವಿಧಾನಸಭಾ ಚುನಾವಣೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಹಳೆ ಮೈಸೂರು ಭಾಗದಲ್ಲಿ ಪ್ರಮುಖ ಒಕ್ಕಲಿಗ ನಾಯಕರಾಗಿ ಹೊರಹೊಮ್ಮಿದ್ದಾರೆ. ಹೀಗಾಗಿಯೇ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಅಹಿಂದ ಮತಗಳನ್ನು ಸೆಳೆಯಲು ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕದಲ್ಲಿ ವ್ಯಾಪಕ ಪ್ರಚಾರ ನಡೆಸುತ್ತಿದ್ದಾರೆ. ಕಲಬುರಗಿಯಂತಹ ಕಡೆಗಳಲ್ಲಿ, ಕೋಲಿ ಅಕಾ ಕಬ್ಬಲಿಗ ಸಮುದಾಯವು ಕಾಂಗ್ರೆಸ್‌ನತ್ತ ವಾಲುತ್ತಿರುವಂತೆ ತೋರುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಕೋಲಿ ಸಮುದಾಯದ ಪರ ರ್ಯಾಲಿಗಳನ್ನು ನಡೆಸುತ್ತಿದ್ದು, ಕೋಲಿ ಸಮುದಾಯಕ್ಕೆ ಎಸ್ಟಿ ಟ್ಯಾಗ್ ಸಮಸ್ಯೆಯನ್ನು ಪರಿಹರಿಸುವ ಸಾಧ್ಯತೆಯಿದೆ.

ಅಹಿಂದ ಮತಗಳಲ್ಲದೆ, ವೀರಶೈವ-ಲಿಂಗಾಯತ ಸಮುದಾಯದಿಂದ ಬಂದ ಪಕ್ಷದ ಅಭ್ಯರ್ಥಿಗಳನ್ನು ಸಹ ಕಾಂಗ್ರೆಸ್ ಬೆಂಬಲಿಸುತ್ತಿದೆ. ಸಾಕಷ್ಟು ಮತಗಳನ್ನು ಹೊಂದಿರುವ ಸಮುದಾಯದ ಒಳಪಂಗಡಗಳ ಅಭ್ಯರ್ಥಿಗಳನ್ನು ಕಾಂಗ್ರೆಸ್ ಜಾಣ್ಮೆಯಿಂದ ಕಣಕ್ಕಿಳಿಸಿದೆ. ಉದಾಹರಣೆಗೆ, ಪಂಚಮಸಾಲಿ ಉಪಪಂಗಡದಿಂದ ಬಂದಿರುವ ಮೃಣಾಲ್ ಹೆಬ್ಬಾಳ್ಕರ್ ಮತ್ತು ಸಂಯುಕ್ತಾ ಪಾಟೀಲ್ ಕ್ರಮವಾಗಿ ಬೆಳಗಾವಿ ಮತ್ತು ಬಾಗಲಕೋಟೆಯಿಂದ ಸ್ಪರ್ಧಿಸುತ್ತಿದ್ದಾರೆ.

ಜಂಗಮ ಉಪಪಂಗಡದ ಆನಂದ ಗಡ್ಡದೇವರಮುತ್ತ ಹಾವೇರಿಯಿಂದ ಸ್ಪರ್ಧಿಸಿದ್ದಾರೆ. ಕಲಬುರಗಿಯಲ್ಲಿ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಸ್ಪರ್ಧಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಗಾಣಿಗ ಲಿಂಗಾಯತ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿರುಸಿನ ಪ್ರಚಾರ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT