ಕಾಂಗ್ರೆಸ್ ಮುಖಂಡ ಬಷರುದ್ದೀನ್ 
ರಾಜ್ಯ

ರಾಯಚೂರು: ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟಿನಿಂದ ಒದೆಯಬೇಕು; ಕಾಂಗ್ರೆಸ್ ಮುಖಂಡ ಬಷರುದ್ದಿನ್

ಜೈ ಶ್ರೀರಾಮ್ ಎಂದು ಹೇಳಿದವರನ್ನು ಪೊಲೀಸರು ಬೂಟಿಗಾಲಲ್ಲಿ ಒದೆಯಬೇಕು ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕನೊಬ್ಬ ವಿವಾದಾತ್ಮಕ ಹೇಳಿಕೆ ನೀಡಿದ್ದಾನೆ.

ರಾಯಚೂರು: ಜೈ ಶ್ರೀರಾಮ್ ಎಂದು ಹೇಳಿದವರನ್ನು ಪೊಲೀಸರು ಬೂಟಿಗಾಲಲ್ಲಿ ಒದೆಯಬೇಕು ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕನೊಬ್ಬ ವಿವಾದಾತ್ಮಕ ಹೇಳಿಕೆ ನೀಡಿದ್ದಾನೆ.

ರಾಯಚೂರಿನ ಕಾಂಗ್ರೆಸ್ ಮುಖಂಡ ಬಷರುದ್ದಿನ್ ಎಂಬಾತ ಈ ಹೇಳಿಕೆ ನೀಡಿದ್ದು ಆತನ ವಿರುದ್ಧ ಇದೀಗ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ರಾಯಚೂರು ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಮುಂದೆ ಬಷರುದ್ದಿನ್ ಉದ್ಧಟತನದ ಹೇಳಿಕೆ ನೀಡಿದ್ದಾನೆ. ಬಷರುದ್ದಿನ್ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಪತಿ ಬಷರುದ್ದಿನ್​ ಹೇಳಿಕೆ ಖಂಡಿಸಿ ರಾಯಚೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ನೂರಾರು ಜನ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಅಶೋಕ್ ದುಡಗುಂಟಿ ಆಗಮಿಸಿ ದೂರು ಸ್ವೀಕರಿಸಿದರು.

ಸದ್ಯ ಬಷೀರುದ್ದೀನ್ ಹೇಳಿಕೆ ಸಖತ್ ವೈರಲ್ ಆಗಿದ್ದು ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ನಡುರಸ್ತೆಯಲ್ಲಿ ಜೈ ಶ್ರೀರಾಮ್ ಅಂತ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT