ಕೋವಿಶೀಲ್ಡ್ ಲಸಿಕೆ ಕುರಿತು ಸುಳ್ಳು ಸುದ್ದಿ 
ರಾಜ್ಯ

Covishield ಲಸಿಕೆ​ ಪಡೆದವರು Cold Drinks, Ice Cream ಸೇವಿಸಬಾರದು ಎಂಬುದು ಸುಳ್ಳು ಸುದ್ದಿ: ಆರೋಗ್ಯ ಇಲಾಖೆ ಸ್ಪಷ್ಟನೆ

ಕೋವಿಶೀಲ್ಡ್ ಲಸಿಕೆ ಪಡೆದವರು ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಸೇವಿಸಬಾರದು.. ಸೇವಿಸಿದರೆ ಹೃದಯನಾಳದಲ್ಲಿ ರಕ್ತ ಹೆಪ್ಪುಗಟ್ಟಿ ಸಾವು ಸಂಭವಿಸಬಹುದು ಎಂಬ ಸುದ್ದಿ ಸುಳ್ಳು ಎಂದು ಆರೋಗ್ಯ ಇಲಾಖೆ ಶನಿವಾರ ಸ್ಪಷ್ಟನೆ ನೀಡಿದೆ.

ಬೆಂಗಳೂರು: ಕೋವಿಶೀಲ್ಡ್ ಲಸಿಕೆ ಪಡೆದವರು ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಸೇವಿಸಬಾರದು. ಸೇವಿಸಿದರೆ ಹೃದಯನಾಳದಲ್ಲಿ ರಕ್ತ ಹೆಪ್ಪುಗಟ್ಟಿ ಸಾವು ಸಂಭವಿಸಬಹುದು ಎಂಬ ಸುದ್ದಿ ಸುಳ್ಳು ಎಂದು ಆರೋಗ್ಯ ಇಲಾಖೆ ಶನಿವಾರ ಸ್ಪಷ್ಟನೆ ನೀಡಿದೆ.

ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ​ಲಸಿಕೆ ಪಡೆದವರು ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಖಾಸಗಿ ಕಾಲೇಜಿನ ನೋಟಿಸ್​ ವೈರಲ್​ ಆಗಿತ್ತು. ಇದಕ್ಕೆ ಆರೋಗ್ಯ ಇಲಾಖೆ ಇಂದು ಸ್ಪಷ್ಟನೆ ನೀಡಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ರೀತಿಯ ಸುದ್ದಿ ಸುಳ್ಳಾಗಿದ್ದು, ಇಂತಹ ಯಾವುದೇ ಸುತ್ತೋಲೆ ಇಲಾಖೆ ಹೊರಡಿಸಿಲ್ಲ. ಗಾಬರಿಗೊಳ್ಳದಿರಿ, ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ರೀತಿ ಸೂಚನೆ ನೀಡಿರುವ ಕಾಲೇಜುಗಳಿಗೆ ಕಾರಣ ಕೇಳಿ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.

ಏನಿದು "ಸುಳ್ಳು ಸುದ್ದಿ"?

ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ, ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತಯ ತಂಪು ಪಾನೀಯಗಳನ್ನು ಕುಡಿಯಬಾರದು. ಏಕೆಂದರೆ ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್​​ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು ದಿಢೀರ್​ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುತ್ತಿದೆ. ಹೀಗಾಗಿ ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಎಂದು ಖಾಸಗಿ ಕಾಲೇಜು ಸುತ್ತೋಲೆ ಹೊರಡಿಸಿತ್ತು.

ಖಾಸಗಿ ಕಾಲೇಜೊಂದು ಈ ರೀತಿಯಾಗಿ ನೋಟಿಸ್​ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಹರದಾಡಲು ಆರಂಭಿಸಿತು. ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ.

ಕೋವಿಶೀಲ್ಡ್​ನಿಂದ ಅಡ್ಡ ಪರಿಣಾಮ

ಕೋವಿಶೀಲ್ಡ್​ ಲಸಿಕೆ ಪಡೆದ ಬಳಿಕ ಮೆದುಳು ಅಥವಾ ದೇಹದ ಇತರೆ ರಕ್ತನಾಳಗಳಲ್ಲಿ ರಕ್ತಹೆಪ್ಪುಗಟ್ಟುವುದು, ಪ್ಲೇಟ್ ಲೆಟ್​ಗಳ ಸಂಖ್ಯೆ ಕಡಿಮೆಯಾಗುವುದ ಬಗ್ಗೆ ಬ್ರಿಟನ್ ನಿವಾಸಿ ಜೆಮಿ ಸ್ಕಾಟ್​ ದೂರು ನೀಡಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಆಸ್ಟ್ರಾಜೆನೆಕಾದ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದು ಅದರಲ್ಲಿ ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮಗಳಿಗೆ ಕಾರಣವಾಗುವುದು ನಿಜ.

ಲಸಿಕೆ ಪಡೆದವರಲ್ಲಿ ಅತ್ಯಪರೂಪದ ಪ್ರಕರಣಗಳಲ್ಲಿ ಥ್ರೊಂಬೋಸಿಸ್‌ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಈ ಸಮಸ್ಯೆಗೆ ತುತ್ತಾದವರು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ಗಳ ಸಂಖ್ಯೆಯಲ್ಲಿ ಕಡಿಮೆಯ ತೊಂದರೆಗೆ ಒಳಗಾಗುತ್ತಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳಲ್ಲಿ ವ್ಯಕ್ತಿಯು ಸಾವನ್ನಪ್ಪುವ ಸಾಧ್ಯತೆಯೂ ಇರುತ್ತದೆ’ ಎಂಬುದಾಗಿ ಸಂಸ್ಥೆ ತಪ್ಪೊಪ್ಪಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT