ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಂಸ್ಕರಿಸಿದ ನೀರು 
ರಾಜ್ಯ

IPL 2024: ಚಿನ್ನಸ್ವಾಮಿ ಸ್ಟೇಡಿಯಂಗೆ ಮತ್ತೆ ಸಂಕಷ್ಟ; ಮೈದಾನದ ನೀರಿನ ಎಲ್ಲ ಮೂಲಗಳ ವಿವರ ಕೇಳಿದ NGT

ರಾಜ್ಯದಲ್ಲಿ ಭೀಕರ ಬರಗಾಲ ಮತ್ತು ತೀವ್ರ ನೀರಿನ ಕೊರತೆಯ ಹೊರತಾಗಿಯೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ಆಯೋಜನೆಗೆ ವಿರೋಧ ವ್ಯಕ್ತಪಡಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಮೈದಾನದ ನೀರಿನ ಎಲ್ಲ ಮೂಲಗಳ ವಿವರ ನೀಡುವಂತೆ ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ಸೂಚಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಮತ್ತು ತೀವ್ರ ನೀರಿನ ಕೊರತೆಯ ಹೊರತಾಗಿಯೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ಆಯೋಜನೆಗೆ ವಿರೋಧ ವ್ಯಕ್ತಪಡಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಮೈದಾನದ ನೀರಿನ ಎಲ್ಲ ಮೂಲಗಳ ವಿವರ ನೀಡುವಂತೆ ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ಸೂಚಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 3 ವಾರಗಳ ಹಿಂದೆ ನೀರಿನ ಬಳಕೆ ಕುರಿತು ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ವರದಿ ಕೇಳಿತ್ತು. ಇದೀಗ ಪಂದ್ಯಗಳಿಗೆ ಬಳಸಿರುವ ನೀರಿನ ಮೂಲ ಹಾಗೂ ಕ್ರೀಡಾಂಗಣದಲ್ಲಿರುವ 400 ಅಡಿ ಆಳದ ನಾಲ್ಕು ಕೊಳವೆ ಬಾವಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

ಜನರು ನೀರಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಹೆಚ್ಚು ನೀರು ಬಳಸುವ ಐಪಿಎಲ್‌ ಪಂದ್ಯಗಳನ್ನು ನಡೆಸುವುದು ಸೂಕ್ತವಲ್ಲ, ಹೀಗಾಗಿ ಬೆಂಗಳೂರಿನನಲ್ಲಿ ನಡೆಯುವ ಪಂದ್ಯಗಳನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರ ಮಾಡಬೇಕು ಎಂದು ಸಾರ್ವಜನಿಕ ವಲಯದಿಂದ ಸರ್ಕಾರಕ್ಕೆ ಮನವಿ ಬಂದಿತ್ತು. ಈ ವೇಳೆ ಕೆಎಸ್​ಸಿಎ ಆಡಳಿತ ಮಂಡಳಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ)ದ ನೀರು ಬಳಕೆ ಮಾಡುಲಾಗುತ್ತದೆ ಎಂದು ಹೇಳಿ ಪಂದ್ಯವಾವಳಿಯನ್ನು ನಡೆಸಿತ್ತು.

ಇದೇ ವಿಚಾರವಾಗಿ ಸ್ಪಷ್ಟನೆ ನೀಡಿರುವ ಕೆಎಸ್ ಸಿಎ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶುಭೇಂದು ಘೋಷ್, 'ನೀರಿಗೆ ಸಂಬಂಧಿಸಿದಂತೆ ನಮಗೆ ಯಾವುದೇ ಸಮಸ್ಯೆ ಇಲ್ಲ. ರಾಜ್ಯ ಸರ್ಕಾರವು ಹೊರಡಿಸಿರುವ ನೀರು ಬಳಕೆ ಮಾರ್ಗಸೂಚಿಯನ್ನು ನಾವು ಪಾಲಿಸುತ್ತಿದ್ದೇವೆ. ಪಿಚ್ ಮತ್ತು ಹೊರಾಂಗಣಕ್ಕಾಗಿ ನಾವು ಯೋಗ್ಯವಾದ ನೀರನ್ನು ಬಳಸುವುದಿಲ್ಲ. ನೀರಿನ ಮೌಲ್ಯ ಏನೆಂಬುವುದು ನಮಗೆ ತಿಳಿದಿದೆ. STP ಘಟಕದ ನೀರನ್ನು ನಾವು ಬಳಸುತ್ತಿದ್ದೇವೆ. ಕ್ರೀಡಾಂಗಣದಲ್ಲಿ ಕೆಲವು ಕಾರ್ಯಗಳಿಗಾಗಿ ಬಳಸಲು ಕೂಡ ಇದೇ ಸಂಸ್ಕರಿತ ನೀರು ಬಳಕೆ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

ಪಂದ್ಯಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಕೆ ಮಾಡಿರುವುದನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪ್ರಧಾನ ಪೀಠ ಗಂಭೀರವಾಗಿ ಪರಿಗಣಿಸಿದ್ದು, ನೀರಿನ ಬಳಕೆಯ ಪ್ರಸ್ತುತ ಸ್ಥಿತಿಯ ಬಗ್ಗೆ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ (ಕೆಎಸ್‌ಸಿಎ) ಆದೇಶಿಸಿ ಮೇ 2ಕ್ಕೆ ಎರಡನೇ ಹಂತದ ವಿಚಾರಣೆಯನ್ನು ನಿಗದಿಪಡಿಸಿತ್ತು.

ಇದೀಗ ವಿಚಾರಣೆ ನಡೆದಿದ್ದು, ಎನ್‌ಜಿಟಿ ಮುಖ್ಯಸ್ಥ ನ್ಯಾ. ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು, ಕ್ರೀಡಾಂಗಣದಲ್ಲಿ ಬಳಕೆಯಾಗುತ್ತಿರುವ ನೀರಿನ ಎಲ್ಲಾ ಮೂಲ, ಕ್ರೀಡಾಂಗಣದಲ್ಲಿರುವ ಬೋರ್‌ವೆಲ್‌, ಒಳಚರಂಡಿ ಸಂಸ್ಕರಣಾ ಘಟಕದ ಬಳಕೆ ಬಗ್ಗೆ 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್​ 13ಕ್ಕೆ ನಿಗದಿಪಡಿಸಿದೆ.

ಆರ್ ಸಿಬಿ ಪಂದ್ಯಕ್ಕಿಲ್ಲ ಆತಂಕ

ಇನ್ನು ಮುಂದಿನ ವಿಚಾರಣೆಗೆ ಇನ್ನೂ ಮೂರು ತಿಂಗಳು ಬಾಕಿ ಇದ್ದು ಈ ವೇಳೆಗಾಗಲೇ ಐಪಿಎಲ್​ ಪಂದ್ಯ ಕೂಡ ಮುಕ್ತಾಯ ಕಂಡಿರುತ್ತದೆ. ಹೀಗಾಗಿ ಈ ಬಾರಿಯ ಆರ್​ಸಿಬಿ ಪಂದ್ಯಗಳಿಗೆ ಯಾವುದೇ ಅಡ್ಡಿ ಉಂಟಾಗದು. ಚಿನ್ನಸ್ವಾಮಿಯಲ್ಲಿ ಇನ್ನು ಕೇವಲ 2 ಪಂದ್ಯ ಮಾತ್ರ ಬಾಕಿ ಉಳಿದಿದೆ. ಇದರಲ್ಲಿ ಒಂದು ಒಂದ್ಯ ಇಂದು(ಶನಿವಾರ) ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT