ಎಚ್ ಡಿ ರೇವಣ್ಣ ಬಂಧನ 
ರಾಜ್ಯ

ಅಪಹರಣ ಪ್ರಕರಣ: JDS ಶಾಸಕ ಹೆಚ್.ಡಿ.ರೇವಣ್ಣ ಬಂಧನ!

ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳಿಸಿದೆ.

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳಿಸಿದ್ದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದೆ.

ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳ್ಳುತ್ತಿದ್ದಂತೆ ಹೆಚ್.ಡಿ ರೇವಣ್ಣಗೆ ಬಂಧನದ ಭೀತಿ ಶುರುವಾಗಿತ್ತು. ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳು ಆಗಮಿಸಿದ್ದರು.

ದೇವೇಗೌಡರ ಮನೆಯಲ್ಲಿ ರೇವಣ್ಣ ಅವರು ಇರಬಹುದು ಎಂದು ಶಂಕಿಸಿರುವ ಅಧಿಕಾರಿಗಳು ಮನೆಯ ಮುಂಬಾಗಿಲು ಹಾಗೂ ಹಿಂಬಾಗಿಲಿನಲ್ಲಿ ನಿಂತುಕೊಂಡಿದ್ದರು. ಇನ್ನು ರೇವಣ್ಣ ಮನೆಯಿಂದ ಹೊರಬರುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಜನಪ್ರತಿನಿಧಿ ನ್ಯಾಯಾಲಯದಲ್ಲಿ ರೇವಣ್ಣರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಆರೋಪಿ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿದರೆ ಎಸ್ಐಟಿ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎನ್ ಜಗದೀಶ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನಂತರ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದರು.

ಅಪಹರಣಕ್ಕೀಡಾಗಿದ್ದ ಎಚ್ ಡಿ ರೇವಣ್ಣ ಮನೆ ಕೆಲಸದಾಕೆ ರಕ್ಷಣೆ; ಪಿಎ ತೋಟದ ಮನೆಯಲ್ಲಿ ಪತ್ತೆ!

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು ಅಪಹರಣಕ್ಕೀಡಾಗಿದ್ದ ಮನೆ ಕೆಲಸದಾಕೆಯನ್ನು SIT ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಏಪ್ರಿಲ್ 29ರಂದು ರೇವಣ್ಣ ಅವರ ಸಂಬಂಧ ಸತೀಶ್ ಬಾಬು ಎಂಬುವರು ಸಂತ್ರಸ್ತ ಮಹಿಳೆಯನ್ನು ಆಕೆಯ ಮನೆಯಿಂದ ಕರೆದೊಯ್ದಿದ್ದರು. ಈ ಸಂಬಂಧ ತನಿಖೆ ತೀವ್ರಗೊಳಿಸಿದ್ದ ಎಸ್ಐಟಿ ಅಧಿಕಾರಿಗಳು ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ರೇವಣ್ಣರ ಪಿಎ ರಾಜಶೇಖರ ಎಂಬುವರ ತೋಟದ ಮನೆಯಲ್ಲಿದ್ದ ಮಹಿಳೆಯನ್ನು ರಕ್ಷಿಸಿರುವ ಎಸ್ಐಟಿ ಅಧಿಕಾರಿಗಳು ಆಕೆಯನ್ನು ಸುರಕ್ಷಿತವಾಗಿ ಕರೆದೊಯ್ದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್