ಪ್ರಜ್ವಲ್ ರೇವಣ್ಣ, ಹೆಚ್. ಡಿ. ರೇವಣ್ಣ 
ರಾಜ್ಯ

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್: ಇಂದು ಸಂತ್ರಸ್ತೆಯರ ಜೊತೆಗೆ ಸ್ಥಳ ಮಹಜರು ಸಾಧ್ಯತೆ

ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ಎಸ್ ಐಟಿ ಚುರುಕುಗೊಳಿಸಿದ್ದು, ಇಂದು ಸಂತ್ರಸ್ತೆಯರ ಜೊತೆಗೆ ಸ್ಥಳ ಮಹಜರು ಮಾಡುವ ಸಾಧ್ಯತೆಯಿದೆ.

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ಎಸ್ ಐಟಿ ಚುರುಕುಗೊಳಿಸಿದ್ದು, ಇಂದು ಸಂತ್ರಸ್ತೆಯರ ಜೊತೆಗೆ ಸ್ಥಳ ಮಹಜರು ಮಾಡುವ ಸಾಧ್ಯತೆಯಿದೆ.

ಹಾಸನದ ಆರ್ ಸಿ ರಸ್ತೆಯಲ್ಲಿರುವ ಪ್ರಜ್ವಲ್ ರೇವಣ್ಣ ಅವರ ನಿವಾಸದಲ್ಲಿ ಅತ್ಯಾಚಾರ ನಡೆದಿದೆ ಎಂದು ಸಂತ್ರಸ್ತೆಯರು ಸೆಕ್ಷನ್ 164 ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಿನ್ನೆ ಹಾಸನದ ಮೂರು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದ ಎಸ್ ಐಟಿ ತಂಡ ಇಂದು, ರೇವಣ್ಣ ನಿವಾಸದಲ್ಲಿ ಸಂತ್ರಸ್ತೆಯರ ಜೊತೆಗೆ ಮಹಜರು ನಡೆಸಿ, ಸಾಕ್ಷ್ಯ ಕಲೆಹಾಕಲಿದೆ. ಎಸ್ ಐಟಿ ತನಿಖೆ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ನಿವಾಸದ ಆವರಣ ನಿಷೇಧಿಸಿ ಗೇಟ್ ಗೆ ಪೊಲೀಸರು ಬೀಗ ಹಾಕಿದ್ದಾರೆ. ನಿನ್ನೆಯವರೆಗೂ ಮನೆಗೆ ಬೀಗ ಹಾಕಿರಲಿಲ್ಲ.

ಹೆಚ್ ಡಿ ರೇವಣ್ಣಗೆ ಜೈಲಾ ಅಥವಾ ಬೇಲಾ ಈ ಮಧ್ಯೆ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರು ಬಂಧನ ಭೀತಿ ಎದುರಿಸುತ್ತಿದ್ದು, ಗುರುವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದ್ದು, ಅವರಿಗೆ ಜೈಲಾ ಅಥವಾ ಬೇಲಾ ಎಂಬುದು ನಿರ್ಧಾರವಾಗಲಿದೆ.

ಎಸ್​ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್​ಗೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ರೇವಣ್ಣ ಕೋರ್ಟ್​ ಮೆಟ್ಟಿಲೇರಿರುವುದು ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT