ರೇವಣ್ಣ 
ರಾಜ್ಯ

ಪ್ರಜ್ವಲ್‌ ಲೈಂಗಿಕ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಎಚ್‌ ಡಿ ರೇವಣ್ಣ

ಪ್ರಜ್ವಲ್‌ ಲೈಂಗಿಕ ಹಗರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್‌ ನಾಯಕ ಎಚ್‌ ಡಿ ರೇವಣ್ಣ ಅವರು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.

ಬೆಂಗಳೂರು: ಪ್ರಜ್ವಲ್‌ ಲೈಂಗಿಕ ಹಗರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್‌ ನಾಯಕ ಎಚ್‌ ಡಿ ರೇವಣ್ಣ ಅವರು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.

ಎಚ್‌ ಡಿ ರೇವಣ್ಣ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ವಿಚಾರಣೆ ನಡೆಸಿದರು.

ವಿಚಾರಣೆಯಲ್ಲಿ ಭಾಗಿಯಾದ ವಿಶೇಷ ತನಿಖಾ ದಳದ ಪರ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ ಎನ್‌ ಜಗದೀಶ್‌ ಅವರು ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಯಾವುದೇ ಹೊಸ ಸೆಕ್ಷನ್‌ಗಳನ್ನು ಅನ್ವಯಿಸಿಲ್ಲ. ರೇವಣ್ಣ ಅವರಿಗೆ ತನಿಖೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಅವರ ವಿರುದ್ಧದ ಆರೋಪಗಳು ಜಾಮೀನು ನೀಡುವಂತಹವಾಗಿವೆ ಎಂದು ಮೆಮೊ ಸಲ್ಲಿಸಿದರು.

ಆಗ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್‌ ಅವರು ತಮ್ಮ ಅರ್ಜಿಯನ್ನು ಹಿಂಪಡೆಯುತ್ತಿದ್ದು, ಎಸ್‌ಪಿಪಿ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು ಎಂದು ನ್ಯಾಯಾಲಯಕ್ಕೆ ಕೋರಿದರು. ಇದನ್ನು ದಾಖಲಿಸಿಕೊಂಡ ನ್ಯಾಯಾಲಯವು ಅರ್ಜಿ ಇತ್ಯರ್ಥಪಡಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

‘ಯಾರು ಏನು ಧರಿಸಬೇಕು ಎಂಬುದನ್ನು ಕೋರ್ಟ್‌ ನಿರ್ಧರಿಸಬಾರದು’: ಹಿಜಾಬ್‌ ವಿವಾದದ ಕುರಿತು BJP ನಾಯಕ Syed Zafar Islam ಆಕ್ಷೇಪ

ನೇಪಾಳದಲ್ಲಿ ಭೀಕರ ಹಠಾತ್ ಪ್ರವಾಹ: ರಕ್ಕಸ ಅಲೆಗೆ ವಲಸೆ ಕಚೇರಿಯಲ್ಲಿದ್ದ ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; Video ಹಂಚಿಕೊಂಡ ಸದ್ಗುರು! ಹೇಳಿದ್ದೇನು?