ಆರೋಪಿ ಸದ್ದಾಂ 
ರಾಜ್ಯ

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿದ ಮುಸ್ಲಿಂ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ, ಆಕೆಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶುಕ್ರವಾರ ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ, ಆಕೆಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶುಕ್ರವಾರ ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಪ್ರಕರಣದ ಸಂತ್ರಸ್ತೆ ದಲಿತ ಸಮುದಾಯಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸದ್ಧಾಂ ತನ್ನ ಮಗಳಿಗೆ ಪರಿಚಿತನಾಗಿದ್ದು, ಆತನನ್ನು ಪ್ರೀತಿಸುತ್ತಿದ್ದಳು ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಸದ್ಧಾಂ ತನ್ನ ಮಗಳಿಗೆ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿ ಗರ್ಭಿಣಿಯಾಗಿಸಿದ್ದಾನೆ ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಬಗ್ಗೆ ಆಸ್ಪತ್ರೆಯಿಂದ ಎಂಎಲ್‌ಸಿ (ಮೆಡಿಕೊ ಲೀಗಲ್ ಕೇಸ್) ಸ್ವೀಕರಿಸಿದ್ದೇವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ್ ತಿಳಿಸಿದ್ದಾರೆ.

ಹಾಗಾಗಿ ತಕ್ಷಣವೇ ಪೋಕ್ಸೋ ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಕೂಡಲೇ ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮನೆಗೆಲಸ ಮಾಡು, ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!