ನಮ್ಮ ಮೆಟ್ರೋ ರೈಲಿನಲ್ಲಿ ಯುವಕ-ಯವತಿಯ ಅಸಭ್ಯ ವರ್ತನೆ 
ರಾಜ್ಯ

Romance in Metro train: ಬೆಂಗಳೂರು ಮೆಟ್ರೋ ರೈಲಿನಲ್ಲಿ ಯುವಕ-ಯವತಿಯ ಅಸಭ್ಯ ವರ್ತನೆ, ಸಹ ಪ್ರಯಾಣಿಕರ ಆಕ್ರೋಶ

ಚಲಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಯುವಕ- ಯುವತಿ ಪರಸ್ಪರ ಬಿಗಿದಪ್ಪಿದ್ದ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಬೆಂಗಳೂರು: ಚಲಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಯುವಕ- ಯುವತಿ ಪರಸ್ಪರ ಬಿಗಿದಪ್ಪಿದ್ದ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಹೌದು.. ಈ ಹಿಂದೆ ದೆಹಲಿ ಮೆಟ್ರೋ ರೈಲಿನಲ್ಲಿ ಯುವಕ-ಯುವತಿಯರಿಬ್ಬರು ಪರಸ್ಪರ ಆಲಂಗಿಸಿಕೊಂಡು ಮುತ್ತಿಟ್ಟುಕೊಂಡಿದ್ದರು. ಇದನ್ನು ಸಹಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು. ಯುವಕರ ವರ್ತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬೆಂಗಳೂರಿನಲ್ಲೇ ಇಂತಹ ಮತ್ತೊಂದು ಕೃತ್ಯ ವರದಿಯಾಗಿದೆ.

ಸ್ಯಾಮ್‌ (Sam459om) ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಅಪ್ಲೋಡ್ ಮಾಡಿದ್ದು, ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ.

ಈ ವಿಡಿಯೋಗೆ ವ್ಯಾಪಕ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ.‌ ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ. ಮತ್ತೆ ಕೆಲವರು 'ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ' ಎಂದಿದ್ದಾರೆ.

ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT