ಸಂಗ್ರಹ ಚಿತ್ರ 
ರಾಜ್ಯ

ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜೂನ್'ನಿಂದ ಅರ್ಜಿ ಆಹ್ವಾನಕ್ಕೆ ಸರ್ಕಾರ ನಿರ್ಧಾರ?

ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್‌ ಕಾರ್ಡ್‌ ವಿತರಣೆಗೆ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.

ಬೆಂಗಳೂರು: ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್‌ ಕಾರ್ಡ್‌ ವಿತರಣೆಗೆ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.

ಜೂನ್‌ ತಿಂಗಳಲ್ಲಿ ಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಹೊಸ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಕೆಯ ವೆಬ್‌ ಪೋರ್ಟಲ್‌ ಅನ್ನು ಸುಮಾರು ಒಂದೂವರೆ ವರ್ಷದಿಂದಲೂ ಸ್ಥಗಿತಗೊಳಿಸಲಾಗಿತ್ತು. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಜೂನ್‌ ಮೊದಲ ವಾರದಲ್ಲಿ ವೆಬ್‌ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅನುವು ಮಾಡಿಕೊಡಲಾಗುವುದು ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ವರದಿಗಳು ತಿಳಿಸಿವೆ.

ಕಳೆದ ವರ್ಷ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿತ್ತು. ಅದಕ್ಕೂ ಮೊದಲು ಚುನಾವಣಾ ತಯಾರಿಗಳನ್ನು ನಡೆಸಲಾಗುತ್ತಿತ್ತು. ಜೊತೆಗೆ ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯೂ ಮುಗಿದಿತ್ತು. ಹೀಗಾಗಿ, ಸುಮಾರು ಒಂದೂವರೆ ವರ್ಷದಿಂದಲೂ ಎಪಿಎಲ್‌ ಕಾರ್ಡ್‌ಗೆ ಅರ್ಜಿಗಳನ್ನು ಸಲ್ಲಿಸಲು ಆನ್‌ಲೈನ್‌ ಪೋರ್ಟಲ್‌ನಲ್ಲಿ ಅವಕಾಶ ಕಲ್ಪಿಸಿರಲಿಲ್ಲ.

ಹೊಸದಾಗಿ ರಚನೆಯಾದ ಕಾಂಗ್ರೆಸ್‌ ಸರ್ಕಾರವು ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತಿತರ ಯೋಜನೆಗಳನ್ನು ಜಾರಿಗೆ ತಂದಿತು. ಇವುಗಳ ಲಾಭ ಪಡೆಯಲು ಲಕ್ಷಾಂತರ ಜನ ಅರ್ಜಿ ಸಲ್ಲಿಸಲು ಕಾಯುತ್ತಿದ್ದರು. ಆದರೆ, ಯೋಜನೆಗೆ ಹೆಚ್ಚಿನ ಅರ್ಜಿಗಳು ಬಂದೇ ಬರುತ್ತವೆ ಎಂದು ಅರಿತ ಸರ್ಕಾರ, ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿರಲಿಲಲ. ಹೀಗಾಗಿ, ಅಂದಿನಿಂದಲೂ ಲಕ್ಷಾಂತರ ಮಂದಿ ಅರ್ಹರು ಕಾರ್ಡ್‌ಗಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ.

ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್‌ 4 ಕ್ಕೆ ಇದೆ. ಜೂನ್‌ 5ಕ್ಕೆ ಚುನಾವಣಾ ಎಲ್ಲಾ ನಿರ್ಬಂಧಗಳು ತೆರವಾಗಲಿವೆ. ಆ ಬಳಿಕ ಕರ್ನಾಟಕದಲ್ಲಿ ಪಡಿತರ ಚೀಟಿ ಹಂಚಿಕೆ ಕಾರ್ಯ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ