ಗೋವಿಂದಪ್ಪ ಸಿದ್ದಾಪುರ  
ರಾಜ್ಯ

ಬಾಗಲಕೋಟೆ: ಚುನಾವಣಾ ಕರ್ತವ್ಯಕ್ಕೆ ಹಾಜರಾಗಲು ಬಸ್ ಹತ್ತುತ್ತಿದ್ದ ವೇಳೆ ಹೃದಯಾಘಾತದಿಂದ ಸಿಬ್ಬಂದಿ ಸಾವು!

ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಸಲುವಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು, ಬಸ್​ ಹತ್ತುವ ವೇಳೆ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆಯ ಮುಧೋಳ ನಗರದಲ್ಲಿ ನಡೆದಿದೆ.

ಬಾಗಲಕೋಟೆ: ರಾಜ್ಯದ 14 ಲೋಕಸಭೆ ಕ್ಷೇತ್ರಗಳಿಗೆ ಮೇ 07ರಂದು ನಡೆಯಲಿರುವ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಸಲುವಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು, ಬಸ್​ ಹತ್ತುವ ವೇಳೆ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆಯ ಮುಧೋಳ ನಗರದಲ್ಲಿ ನಡೆದಿದೆ.

ಶಿಕ್ಷಕನನ್ನು ಗೋವಿಂದಪ್ಪ ಸಿದ್ದಾಪುರ ಎಂದು ಗುರುತಿಸಲಾಗಿದೆ. ಬಸ್ ನಿಲ್ದಾಣದ ಗೇಟ್ ಬಳಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದ ವೇಳೆ ಅವಘಡ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಚುನಾವಣೆಯ ಹಿನ್ನಲೆ ಅವರನ್ನು ಜಮಖಂಡಿ ತಾಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ಆಹ್ವಾನಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!