ಜೆಡಿಎಸ್ ನಾಯಕರಿಂದ ಭವಾನಿ ರೇವಣ್ಣ ಭೇಟಿ 
ರಾಜ್ಯ

ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಭೇಟಿ ಮಾಡಿ ಆತ್ಮಸ್ಥೈರ್ಯ ತುಂಬಿದ ಜೆಡಿಎಸ್ ನಾಯಕರು

ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಬಂಧನ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಿಂದ ವಿದೇಶಕ್ಕೆ ಹಾರಿ ಹೋಗಿರುವ ಪ್ರಜ್ವಲ್ ರೇವಣ್ಣ ಅವರಿಂದ ತೀವ್ರ ನೋವಿನಲ್ಲಿ ಇರುವ ಭವಾನಿ ರೇವಣ್ಣ ಅವರಿಗೆ ಸೋಮವಾರ ಜೆಡಿಎಸ್ ನಾಯಕರು ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಹಾಸನ: ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಬಂಧನ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಿಂದ ವಿದೇಶಕ್ಕೆ ಹಾರಿ ಹೋಗಿರುವ ಪ್ರಜ್ವಲ್ ರೇವಣ್ಣ ಅವರಿಂದ ತೀವ್ರ ನೋವಿನಲ್ಲಿ ಇರುವ ಭವಾನಿ ರೇವಣ್ಣ ಅವರಿಗೆ ಸೋಮವಾರ ಜೆಡಿಎಸ್ ನಾಯಕರು ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಶ್ರವಣಬೆಳಗೊಳದ ಶಾಸಕ ಸಿ.ಎನ್.ಬಾಲಕೃಷ್ಣ, ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಸೇರಿದಂತೆ ಪಕ್ಷದ ಹಿರಿಯ ಕಾರ್ಯಕರ್ತರು ಸೋಮವಾರ ಭವಾನಿ ರೇವಣ್ಣ ಅವರನ್ನು ಹೊಳೆನರಸೀಪುರದ ನಿವಾಸದಲ್ಲಿ ಭೇಟಿ ಮಾಡಿದರು.

ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪದ ಮೇಲೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿರುವ ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ನಾಯಕರು ಚರ್ಚೆ ನಡೆಸಿದರು.

ಪಕ್ಷದ ಹಿತದೃಷ್ಟಿಯಿಂದ ಜೆಡಿಎಸ್ ನಾಯಕರ ಮುಂದಿನ ನಡೆ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಭಾನುವಾರ ಹಾಸನದಲ್ಲಿ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು ಕೂಡಿ ಧರಣಿ ನಡೆಸುವ ಮೂಲಕ ರೇವಣ್ಣ ಬಂಧನವನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಾಲಕೃಷ್ಣ, ಎಸ್‌ಐಟಿ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ರೇವಣ್ಣ ಅವರು ಯಾವುದೇ ವಿಚಾರದಲ್ಲಿ ಭಾಗಿಯಾಗಿಲ್ಲವಾದ್ದರಿಂದ ಅವರನ್ನು ಬಿಡುಗಡೆ ಮಾಡಬೇಕು ಎಂದರು.

ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಪ್ರಕರಣ, ವೀಡಿಯೋದಲ್ಲಿರುವ ಸಂತ್ರಸ್ಥ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಬಂಧನ ವಿಚಾರದಿಂದ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರು ಆಘಾತಕ್ಕೆ ಒಳಗಾಗಿದ್ದಾರೆ. ಅಲ್ಲದೆ ಈ ಪ್ರಕರಣ ಹೊರ ಬರುತ್ತಿದ್ದಂತೆ ಭವಾನಿ ರೇವಣ್ಣ ಅವರು ಎಲ್ಲೂ ಹೋಗದೆ ಮನೆಯಲ್ಲೇ ಇದ್ದಾರೆ. ಹೀಗಾಗಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಜೆಡಿಎಸ್ ನಾಯಕರು ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT