ಪ್ರಾತಿನಿಧಿಕ ಚಿತ್ರ 
ರಾಜ್ಯ

ಐಪಿಎಲ್ ಬೆಟ್ಟಿಂಗ್ ದಂಧೆ: ಮೂವರ ವಿರುದ್ಧ ಉಡುಪಿ ಪೊಲೀಸರಿಂದ ಪ್ರಕರಣ ದಾಖಲು

ಮೇ 8ರಂದು ಕುಂದಾಪುರ ನಗರದ ಗಾಂಧಿ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಿಂತು 20 ವರ್ಷದ ಆಸುಪಾಸಿನ ಸುದರ್ಶನ್ ಮತ್ತು ಕರ್ತವ್ಯ ಎಂಬುವವರು ಮೊಬೈಲ್ ಬೆಟ್ಟಿಂಗ್ ಆ್ಯಪ್ ಮೂಲಕ ಎರಡು ತಂಡಗಳ ನಡುವೆ ನಡೆಯುವ ಐಪಿಎಲ್ ಪಂದ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಅಕ್ರಮವಾಗಿ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿಕೊಂಡಿದ್ದರು.

ಉಡುಪಿ: ಮೊಬೈಲ್ ಆ್ಯಪ್‌ ಮೂಲಕ ಅಕ್ರಮವಾಗಿ ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಗ್ಯಾಂಗ್ ಅನ್ನು ಬಂಧಿಸಿರುವ ಉಡುಪಿ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೇ 8ರಂದು ಕುಂದಾಪುರ ನಗರದ ಗಾಂಧಿ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಿಂತು 20 ವರ್ಷದ ಆಸುಪಾಸಿನ ಸುದರ್ಶನ್ ಮತ್ತು ಕರ್ತವ್ಯ ಎಂಬುವವರು ಮೊಬೈಲ್ ಬೆಟ್ಟಿಂಗ್ ಆ್ಯಪ್ ಮೂಲಕ ಎರಡು ತಂಡಗಳ ನಡುವೆ ನಡೆಯುವ ಐಪಿಎಲ್ ಪಂದ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಅಕ್ರಮವಾಗಿ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿಕೊಂಡಿದ್ದರು. ಈ ಬಗ್ಗೆ ಪೊಲೀಸ್ ಇನ್ಸ್‌ಪೆಕ್ಟರ್ ರಾಮಚಂದ್ರ ನಾಯಕ್ ಅವರಿಗೆ ಸುಳಿವು ಸಿಕ್ಕಿತ್ತು.

ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದಾಗ, 22 ವರ್ಷ ವಯಸ್ಸಿನ ಹೆಬ್ರಿ ನಿವಾಸಿ ತೇಜಸ್ ಅವರು ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ಸ್ವೀಕರಿಸಲು ಸ್ಥಳಕ್ಕೆ ಬರಬೇಕಿತ್ತು. ಮೂವರು ಗ್ಯಾಂಗ್‌ನಂತೆ ಕೆಲಸ ಮಾಡುತ್ತಿದ್ದು, ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಮೂವರನ್ನು ವಿಚಾರಣೆಗೊಳಪಡಿಸಲಾಗಿದ್ದು, ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 78 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೂವರು ‘ಪಾರ್ಕರ್’ ಎಂಬ ಬೆಟ್ಟಿಂಗ್ ಆ್ಯಪ್ ಬಳಸಿದ್ದು, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಕ್ರಿಕೆಟ್ ಪಂದ್ಯದಲ್ಲಿ ಬೆಟ್ಟಿಂಗ್ ಮೂಲಕ ಹಣ ಸ್ವೀಕರಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿಗಳಲ್ಲಿ ಒಬ್ಬನಾದ ತೇಜಸ್ ಎಂಬಾತ ಸುದರ್ಶನ್ ಮತ್ತು ಕರ್ತವ್ಯ ಹೊರತುಪಡಿಸಿ ಇತರ ಹಲವರಿಗೆ ಈ ನಿರ್ದಿಷ್ಟ ಅಪ್ಲಿಕೇಶನ್ ಬಳಸಿ ಬೆಟ್ಟಿಂಗ್ ಮಾಡಲು ಸಹಾಯ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಂತರ ಮೂವರು ಸ್ಟೇಷನ್ ಜಾಮೀನು ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT