ಸೆಕ್ಸ್ ವಿಡಿಯೋ ಹಗರಣ: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಚಿಕ್ಕಮಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಮಧ್ಯೆ ಪ್ರಜ್ವಲ್ ರೇವಣ್ಣರ ವಿಡಿಯೋ ಮತ್ತು ಫೋಟೋಗಳನ್ನು ಅಪ್ಲೋಡ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನ್ ಒಬ್ಬ ನನ್ನು ಪೊಲೀಸರು ಬಂಧಿಸಿದ್ದಾರೆ.
ಕುದುರೆಮುಖ ಠಾಣೆ ಪೊಲೀಸರು ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಪ್ರಜ್ವಲ್, ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದನು.
ಈ ಸಂಬಂಧ ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರಜ್ವಲ್ ಟ್ರೋಲ್ ಪೇಜ್ ಅಡ್ಮಿನ್ ಸಹ ಆಗಿದ್ದಾನೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.