ಬಂಧಿತ ಆರೋಪಿ ಮುಸ್ತಫಾ ಪೈಚಾರ್. 
ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಬಂಧನ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಮುಸ್ತಫಾ ಪೈಚಾರ್ ಬಂಧಿತ ಆರೋಪಿ. ಇಂದು ಬೆಳಗ್ಗೆ ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್​ ಆನೆಮಹಲ್ ಬಳಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು 2002ರ ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್‌ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಆರಂಭದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿತ್ತು. ಕಳೆದ ವರ್ಷ ಜನವರಿಯಲ್ಲಿ ಎನ್‌ಐಎ 21 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಎನ್‌ಐಎ ಚಾರ್ಜ್‌ಶೀಟ್‌ನ ಪ್ರಕಾರ, ಒಂದು ಸಮುದಾಯದ ಸದಸ್ಯರಲ್ಲಿ ಭಯವನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಕೋಮು ದ್ವೇಷ, ಅಶಾಂತಿಯನ್ನು ಸೃಷ್ಟಿಸಲು ಪಿಎಫ್‌ಐನ ಕಾರ್ಯಸೂಚಿಯ ಭಾಗವಾಗಿ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿತ್ತು.

ಸೆಪ್ಟೆಂಬರ್ 2022 ರಲ್ಲಿ, ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲೆ ಐದು ವರ್ಷಗಳ ನಿಷೇಧ ಹೇರಿತ್ತು. ಪಿಎಫ್‌ಐ ಮತ್ತು ಅದರ ಎಲ್ಲ ಅಂಗಸಂಸ್ಥೆಗಳು, ಸಹವರ್ತಿಗಳು ಹಾಗೂ ರಂಗಗಳನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (UAPA) ಅಡಿ ನಿಷೇಧ ಹೊರಡಿಸಿತ್ತು. ಇದರೊಂದಿಗೆ ಯುಎಪಿಎ ಸೆಕ್ಷನ್ 35ರ ಅಡಿ ನಿಷೇಧಕ್ಕೆ ಒಳಗಾದ 42 ಭಯೋತ್ಪಾದನಾ ಸಂಘಟನೆಗಳ ಪಟ್ಟಿಗೆ ಪಿಎಫ್‌ಐ ಸೇರ್ಪಡೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT